ಶ್ರೀರಂಗಪಟ್ಟಣ: ‘ಪ್ರಗತಿ ಮತ್ತು ವಿಶ್ವಾಸಾರ್ಹತೆ ದೃಷ್ಟಿಯಿಂದ ಸಹಕಾರ ಸಂಘಗಳು ಆರ್ಥಿಕ ಶಿಸ್ತು ರೂಢಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ಮುಖಂಡರಾದ ಸುಮತಿ ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.

ತಾಲ್ಲೂಕಿನ ಅಲ್ಲಾಪಟ್ಟಣ ಗ್ರಾಮದಲ್ಲಿ ಸೋಮವಾರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳಾ ಸಹಕಾರ ಸಂಘಗಳು ಲಭ್ಯ ಸಂಪನ್ಮೂಲವನ್ನು ಸರಿಯಾದ ಉದ್ದೇಶಕ್ಕೆ ಬಳಸಬೇಕು. ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲು ಮಾರಾಟದಿಂದ ಬರುವ ಲಾಭಾಂಶದ ಜತೆಗೆ ಹಾಲು ಒಕ್ಕೂಟದ ನೆರವನ್ನೂ ಪಡೆದು ಆರ್ಥಿಕವಾಗಿ ದೃಢತೆ ಸಾಧಿಸಬೇಕು. ಸ್ಥಳೀಯ ಸಂಘ, ಸಂಸ್ಥೆಗಳ ಜತೆಗೂಡಿ ಹಾಲು ಉತ್ಪಾದಕರು ಹಾಗೂ ಗ್ರಾಮದ ಹಿತಕ್ಕಾಗಿ ಕೆಲಸ ಮಾಡಬೇಕು’ ಎಂದು ಅವರು ತಿಳಿಸಿದರು.

ಸಂಘದ ಕಾರ್ಯದರ್ಶಿ ಎ.ಆರ್. ಅಶ್ವಿನಿ ಮಾತನಾಡಿ, ‘ಅಲ್ಲಾಪಟ್ಟಣ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಸದ್ಯ ಲಾಭದಲ್ಲಿ ನಡೆಯುತ್ತಿದೆ. ಸ್ವಂತ ಕಟ್ಟಡ ಹೊಂದಬೇಕು ಎಂಬ ಕನಸು ಇಂದು ನನಸಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷೆ ಎನ್. ಶೋಭಾ ರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಸುಮಿತ್ರ, ಮಮತಾ, ಸರಸ್ವತಿ, ಪ್ರಭಾ, ಮಂಜುಳಾ, ಪಾರ್ವತಿ, ಟಿ. ಸುನೀತಾ, ಪ್ರೇಮಾ, ಮನ್ಮುಲ್ ವಿಸ್ತರಣಾಧಿಕಾರಿಗಳಾದ ಎಂ.ಕೆ. ದರ್ಶನ್, ಶಿವಶಂಕರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-40-1819153161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.