ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀರಂಗಪಟ್ಟಣ: ಸಂಕೀರ್ತನಾ ಯಾತ್ರೆಗೆ ಕ್ಷಣಗಣನೆ

Published 24 ಡಿಸೆಂಬರ್ 2023, 4:53 IST
Last Updated 24 ಡಿಸೆಂಬರ್ 2023, 4:53 IST
ಅಕ್ಷರ ಗಾತ್ರ

ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ತಟದಲ್ಲಿ ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಹನುಮಾನ್‌ ಮಾಲೆ ಧಾರಿಗಳ ಸಂಕೀರ್ತನಾ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.

ಬೆಳಿಗ್ಗೆ 11ಕ್ಕೆ ಪಟ್ಟಣ ಸಮೀಪದ ಗಂಜಾಂ ನಿಮಿಷಾಂಬ ದೇವಾಲಯ ಬಳಿ ಇರುವ ಆಂಜನೇಯಸ್ವಾಮಿ ದೇವಾಲಯದಿಂದ ಸಂಕೀರ್ತನಾ ಯಾತ್ರೆ ಆರಂಭವಾಗಲಿದೆ. ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಗಂಜಾಂ ಮುಖ್ಯ ರಸ್ತೆ, ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಪೇಟೆ ಬೀದಿ ಮಾರ್ಗವಾಗಿ ಶ್ರೀರಂಗನಾಥಸ್ವಾಮಿ ದೇವಾಲಯದವರೆಗೆ ಯಾತ್ರೆ ಸಾಗಲಿದೆ. ಬಳಿಕ ಹನುಮಾನ್‌ ಮಾಲೆಯನ್ನು ವಿಸರ್ಜಿಸಲಾಗುತ್ತದೆ.

ಹೊರ ಜಿಲ್ಲೆ, ರಾಜ್ಯಗಳಿಂದಲೂ ಹನುಮ ಭಕ್ತರು ಯಾತ್ರೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದಾರೆ. ಯುವಕರು ಬೈಕ್ ರ್ಯಾಲಿ ನಡೆಸುತ್ತಿದ್ದಾರೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದೆಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇಬ್ಬರು ಎಸ್.ಪಿ. ಗಳ ನೇತೃತ್ವದಲ್ಲಿ ಎರಡು ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT