ಶ್ರೀರಂಗಪಟ್ಟಣ: ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಮೈಸೂರಿನ ಡಯಟ್ನಲ್ಲಿ ಶಿಕ್ಷಣಾಧಿಕಾರಿಯಾಗಿದ್ದ ಚಂದ್ರಶೇಖರ್ ಅವರಿಗೆ ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ವಿ. ನಂದೀಶ್ ಅಧಿಕಾರ ಹಸ್ತಾಂತರಿಸಿದರು.

‘ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಅಧಿಕಾರಿಗಳು ಮತ್ತು ಶಿಕ್ಷಕರು ಒಗ್ಗೂಡಿ ಕೆಲಸ ಮಾಡಬೇಕಾದ ಅಗತ್ಯವಿದೆ. ಕುಂದು ಕೊರತೆಗಳನ್ನು ತಕ್ಷಣ ಗಮನಕ್ಕೆ ತರಬೇಕು. ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಶಾಲಾಭಿವೃದ್ಧಿ ಸಮಿತಿಗಳ ವಿಶ್ವಾಸ ಪಡೆಯಬೇಕು’ ಎಂದು ಚಂದ್ರಶೇಖರ್ ಸಲಹೆ ನೀಡಿದರು.

ನಿಕಟ ಪೂರ್ವ ಬಿಇಒ ಬಿ.ವಿ. ನಂದೀಶ್, ‘ಒಂಭತ್ತು ತಿಂಗಳ ಸೇವೆ ತೃಪ್ತಿ ತಂದಿದೆ’ ಎಂದರು. ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಮುಖ್ಯ ಶಿಕ್ಷಕರಾದ ಸೆಲ್ವಿ, ವಿಜಯಶ್ರೀ, ಶಾಯಿದಾ ಬಾನು, ರವಿ, ಜವನ ನಾಯಕ್, ವಸಂತ, ರಾಜು, ಶಿಕ್ಷಣ ಸಂಯೋಜಕಿ ಬಿ.ಕೆ. ಪ್ರತಿಮಾ, ವ್ಯವಸ್ಥಾಪಕ ಕಾಂತರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-360203597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.