ಶ್ರೀರಂಗಪಟ್ಟಣ: ‘ಗ್ರಾಹಕರು ವಿದ್ಯುತ್ ಮಿತವಾಗಿ ಬಳಸುವ ಮೂಲಕ ಅನಗತ್ಯ ವೆಚ್ಚ ಮತ್ತು ವಿದ್ಯುತ್ ಉಳಿತಾಯಕ್ಕೆ ಸಹಕರಿಸಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಮನವಿ ಮಾಡಿದರು.

ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಸೆಸ್ಕ್ ಮಾದರಿ ಗ್ರಾಮ ಯೋಜನೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ತಾಲ್ಲೂಕಿನಲ್ಲಿ 6 ಗ್ರಾಮಗಳನ್ನು ಸೆಸ್ಕ್ ಮಾದರಿ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ₹50 ಲಕ್ಷ ವೆಚ್ಚದಲ್ಲಿ ಸುಧಾರಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಶಿಥಿಲ ವಿದ್ಯುತ್ ಕಂಬಗಳ ಬದಲಾವಣೆ, ವಿದ್ಯುತ್ ಪರಿವರ್ತಕಗಳ ಅಳವಡಿಕೆ ಸೇರಿದಂತೆ ವಿದ್ಯುತ್ ಸರಬರಾಜಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು’ ಎಂದು ಹೇಳಿದರು.

‘ಮಹದೇವಪುರ ಗ್ರಾಮದಲ್ಲಿ ಕಾಳಮ್ಮ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಅನುದಾನ ನೀಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಅನುದಾನ ಕೊಡಲಾಗುವುದು’ ಎಂದು ಅವರು ಭರವಸೆ ನೀಡಿದರು.

ತಹಶೀಲ್ದಾರ್ ಚೇತನಾ ಯಾದವ್, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ತಾ.ಪಂ. ಮಾಜಿ ಸದಸ್ಯ ಎಸ್. ಕಾಳೇಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರವಿಕುಮಾರ್, ಜವನೇಗೌಡ, ಮುಖಂಡ ಪ್ರಸನ್ನ, ಸೆಸ್ಕ್ ಜೂನಿಯರ್ಎಂಜಿನಿಯರ್ ವೀರಭದ್ರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-40-303582858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.