ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ಹೋಬಳಿಯ ಹೊಸಹಳ್ಳಿ ಗ್ರಾಮ ಪಂಚಾಯಿತಿ 2025–26ನೇ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ, ಅಂದರೆ ₹1.93 ಕೋಟಿ ತೆರಿಗೆ ಸಂಗ್ರಹಿಸಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6 ಗ್ರಾಮಗಳು ಇದ್ದು ಅನಗಹಳ್ಳಿ ಒಂದರಲ್ಲೇ ₹93.03 ಲಕ್ಷ ತೆರಿಗೆ ಸಂಗ್ರಹವಾಗಿದೆ. ಮೊಗರಹಳ್ಳಿಯಲ್ಲಿ ₹51.47 ಲಕ್ಷ, ಹೊಸಹಳ್ಳಿಯಲ್ಲಿ ₹30.66 ಲಕ್ಷ, ಪುರದಲ್ಲಿ ₹9.94 ಲಕ್ಷ, ಜಕ್ಕನಕೊಪ್ಪಲಿನಲ್ಲಿ ₹5.75 ಲಕ್ಷ ಹಾಗೂ ಕಾರೇಕುರದಲ್ಲಿ ₹2.21 ಲಕ್ಷ ತೆರಿಗೆ ಸಂಗ್ರಹವಾಗಿದೆ.

ಗ್ರಾಮ ಪಂಚಾಯಿತಿ 2023–24ನೇ ಸಾಲಿನಲ್ಲಿ ₹80 ಲಕ್ಷ ಮತ್ತು 2024–25ನೇ ಸಾಲಿನಲ್ಲಿ ₹1.17 ಕೋಟಿ ತೆರಿಗೆ ಸಂಗ್ರಹಿಸಿತ್ತು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ.

‘ಹೊಸಹಳ್ಳಿ ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನದಲ್ಲಿದೆ. ₹1.93 ಕೋಟಿ ತೆರಿಗೆ ಸಂಗ್ರಹ ನಿಜಕ್ಕೂ ದೊಡ್ಡ ಸಾಧನೆ. ನಗುವನಹಳ್ಳಿ ಗ್ರಾ.ಪಂ. ₹ 1.5 ಕೋಟಿ ತೆರಿಗೆ ಸಂಗ್ರಹಿಸಿ ತಾಲ್ಲೂಕಿನಲ್ಲಿ ಎರಡನೇ ಸ್ಥಾನ ಪಡೆದಿದೆ. 2025–26ನೇ ಆರ್ಥಿಕ ವರ್ಷದಲ್ಲಿ ನಮ್ಮ ತಾಲ್ಲೂಕಿನಲ್ಲಿ ₹9.63 ಕೋಟಿ ತೆರಿಗೆ ಸಂಗ್ರಹವಾಗಿದ್ದು, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಏಪ್ರಿಲ್ ತಿಂಗಳಿನಿಂದಲೇ ತೆರಿಗೆ ಸಂಗ್ರಹ ಮಾಡುವಂತೆ ಎಲ್ಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಚಂದ್ರ ತಿಳಿಸಿದ್ದಾರೆ.

‘ಶಶಿಕಲಾ ಅವರು ನಮ್ಮ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿ ಅಧಿಕಾರಿಯಾಗಿ ಬಂದ ನಂತರ ತೆರಿಗೆ ಸಂಗ್ರಹ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದಿರುವುದು ನಮ್ಮ ಗ್ರಾ.ಪಂ.ಗೆ ನಿಜಕ್ಕೂ ಹೆಮ್ಮೆಯ ವಿಷಯ’ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಚಲುವರಾಜು ಸಂತಸ ವ್ಯಕ್ತಪಡಿಸಿದ್ದಾರೆ.

ಸದಸ್ಯರು, ಸಿಬ್ಬಂದಿಯಿಂದ ಸಾಧನೆ’

‘ಹೊಸಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೈಗಾರಿಕೆಗಳು ಮತ್ತು ಹೊಸ ವಸತಿ ಬಡಾವಣೆಗಳು ಇರುವುದರಿಂದ ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಈ ಹಿಂದಿನ ಎಲ್ಲ ದಾಖಲೆಗಳನ್ನು ಮೀರಿ ತೆರಿಗೆ ಸಂಗ್ರಹಿಸಿದ್ದೇವೆ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್. ನಂದಿನಿ ಮತ್ತು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಚಂದ್ರ ಅವರ ಮಾರ್ಗದರ್ಶನ ಹಾಗೂ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಮತ್ತು ಸಿಬ್ಬಂದಿಯ ಶ್ರಮದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಶಕ್ತಿ ಮೀರಿ ಕೆಲಸ ಮಾಡುತ್ತೇವೆ’ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎಸ್.ಡಿ. ಶಶಿಕಲಾ ಹೇಳುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-40-290201334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.