ಶ್ರೀರಂಗಪಟ್ಟಣ: ಪಟ್ಟಣ ಸಮೀಪದ ಚಂದ್ರವನ ಆಶ್ರಮದ ಆವರಣದಲ್ಲಿರುವ ಕಾಶಿ ಚಂದ್ರಮೌಳೇಶ್ವರಸ್ವಾಮಿ ದೇವಾಲಯದಲ್ಲಿ ಭಾನುವಾರ ನಡೆಯುವ ಮಹಾ ಶಿವರಾತ್ರಿ ಆಚರಣೆಯಲ್ಲಿ ಭಾಗವಹಿಸುವ ಭಕ್ತರಿಗೆ ಹಂಚಲು 2000 ತಂಬಿಟ್ಟು ಉಂಡೆಗಳನ್ನು ಸಿದ್ದಪಡಿಸಲಾಗಿದೆ.

ಚಂದ್ರಮೌಳೇಶ್ವರ ದೇವರಿಗೆ ರುದ್ರಾಭಿಷೇಕ, ಆಯಾಮದ ಪೂಜೆ, ಅಖಂಡ ಭಜನೆ ನಡೆಯಲಿದೆ ಎಂದು ಆಶ್ರಮದ ಕಾರ್ಯದರ್ಶಿ ಟಿ.ಪಿ. ಶಿವಕುಮಾರ್ ತಿಳಿಸಿದ್ದಾರೆ.

ಓಂಕಾರೇಶ್ವರ ದೇಗುಲ: ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಸಮೀಪ, ಕಾವೇರಿ ಸಾಯಿಧಾಮದ ಆವರಣದಲ್ಲಿರುವ ಶತಮಾನಗಳ ಹಿಂದಿನ ಓಂಕಾರೇಶ್ವರ ದೇವಾಲಯದಲ್ಲಿ ಭಾನುವಾರ ಮಹಾ ಶಿವರಾತ್ರಿ ಆವಚರಣೆ ನಡೆಯಲಿದೆ. ಮಾನಸ ಸರೋವರದಿಂದ ತಂದಿರುವ ಪವಿತ್ರ ಜಲದಿಂದ ಓಂಕಾರೇಶ್ವರ ದೇವರಿಗೆ ಅಭಿಷೇಕ ಮಾಡಲಾಗುತ್ತದೆ. ರುದ್ರಾಭಿಷೇಕ, ಲಕ್ಷ ಬಿಲ್ವಾರ್ಚನೆ, ಜಾವದ ಪೂಜೆಗಳು ಮತ್ತು ಇಡೀ ರಾತ್ರಿ ಅಖಂಡ ಭಜನೆ ನಡೆಯಲಿದೆ. ಸೋಮವಾರ ಬೆಳಿಗ್ಗೆ ಪ್ರಸಾದ ವಿತರಣೆ ಇರುತ್ತದೆ ಎಂದು ದೇವಾಲಯದ ಮುಖ್ಯಸ್ಥ ಎಚ್. ಜಯದೇವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.