ಶ್ರೀರಂಗಪಟ್ಟಣ: 13 ವರ್ಷದ ಬಾಲಕಿಯ ಮೇಲೆ 22 ವರ್ಷದ ಯುವಕನೊಬ್ಬ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿರುವ ಪ್ರಕರಣ ತಾಲ್ಲೂಕಿನ ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಕೋಳಿ ಫಾರಂ ಒಂದರಲ್ಲಿ ಪೋಷಕರ ಜತೆ ಕೆಲಸ ಮಾಡುತ್ತಿದ್ದ ಬಾಲಕಿಯ ಮೇಲೆ ಅದೇ ಗ್ರಾಮದ ಆಟೊ ಚಾಲಕ ಮುರಳಿ ಎಂಬಾತ ಐದಾರು ತಿಂಗಳುಗಳಿಂದ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಯ ವರ್ತನೆಯಲ್ಲಿ ಕಂಡುಬಂದ ಬದಲಾವಣೆ ಗುರುತಿಸಿದ ಪೋಷಕರು ಶುಕ್ರವಾರ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಆಕೆ ಗರ್ಭಿಣಿಯಾಗಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.

ತಮ್ಮ ಅಜ್ಜಿಯನ್ನು ಆಸ್ಪತ್ರೆಗೆ ಕರೆ ತರುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿಯ ಹೇಳಿಕೆ ಆಧರಿಸಿ ಆರೋಪಿಯನ್ನು ಶನಿವಾರ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕೆಆರ್ಎಸ್ ಠಾಣೆಯ ಮಹಿಳಾ ಪಿಎಸ್ಐ ಸುಷ್ಮಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.