ಶ್ರೀರಂಗಪಟ್ಟಣ: ‘ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಆಡಳಿತದ ಬಗ್ಗೆ ಸಾಕಷ್ಟು ಅನುಭವವಿದೆ. ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ತಾಲ್ಲೂಕಿನ ಕೆಆರ್ಎಸ್ನಲ್ಲಿ, ತೋಟಗಾರಿಕೆ ಇಲಾಖೆ ಏರ್ಪಡಿಸಿದ್ದ ರೈತರಿಗೆ ತೆಂಗಿನ ಸಸಿ ವಿತರಿಸುವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ‘ನಮ್ಮ ತಂದೆ ಸಚಿವರಾಗಿ, ತಾಯಿಯವರು ಮೂರು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಕಳೆದ 40 ವರ್ಷಗಳಿಂದ ಜನರ ಜತೆ ಒಡನಾಟ ಇಟ್ಟುಕೊಂಡಿದ್ದೇನೆ. ಆಡಳಿತ ವ್ಯವಸ್ಥೆಯನ್ನು ಹತ್ತಿರದಿಂದ ನೋಡಿದ್ದೇನೆ. ಸಚಿವ ಸ್ಥಾನ ನೀಡುವಂತೆ ಪಕ್ಷದ ವರಿಷ್ಟರಲ್ಲಿ ಮನವಿಯನ್ನೂ ಮಾಡಿದ್ದೇನೆ’ ಎಂದು ತಿಳಿಸಿದರು.

‘ಯಾವುದೇ ಖಾತೆ ಕೊಟ್ಟರೂ ಯಶಸ್ವಿಯಾಗಿ ನಿರ್ವಹಿಸುವ ಶಕ್ತಿ ಇದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರು ನಾಯಕರ ಜತೆಗೂ ಉತ್ತಮ ಬಾಂಧವ್ಯ ಇದೆ. ಹಾಗಾಗಿ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-40-1702442515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.