ಶ್ರೀರಂಗಪಟ್ಟಣ: ‘ಕ್ಷೇತ್ರದಲ್ಲಿ ಒಂದು ಅಂಗಲವೂ ಸರ್ಕಾರಿ ಭೂಮಿ ಕಬಳಿಕೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

‘ಕಸಬಾ ಮತ್ತು ಬೆಳಗೊಳ ಹೋಬಳಿ ವ್ಯಾಪ್ತಿಯಲ್ಲಿ ಸರ್ಕಾರದ ಜಮೀನು ಕಬಳಿಕೆ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಲಭ್ಯ ಇರುವ ಸರ್ಕಾರಿ ಜಾಗಗಳನ್ನು ಗುರುತಿಸಿ ಫಲಕ ಹಾಕಬೇಕು. ಅತಿಕ್ರಮ ಪ್ರವೇಶ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಸಾವಿರ ನಿವೇಶನ ಹಂಚಿಕೆ:

ಕ್ಷೇತ್ರದಾದ್ಯಂತ ವಸತಿ ರಹಿತರನ್ನು ಗುರುತಿಸಿ ಉಚಿತ ನಿವೇಶನ ಹಂಚಲು ಉದ್ದೇಶಿಸಲಾಗಿದೆ. ಅದಕ್ಕೆ ಅಗತ್ಯವಾದ ಸರ್ಕಾರಿ ಭೂಮಿಯನ್ನು ಗುರುತಿಸುವಂತೆ ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿಗಳಿಗೆ ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ಕೆಲವು ಅಧಿಕಾರಿಗಳು ಇನ್ನಾದರೂ ಸರ್ಕಾರಿ ಜಾಗದ ಲಭ್ಯತೆ ಬಗ್ಗೆ ವರದಿ ನೀಡಿಲ್ಲ. ಮಾ. 20ರೊಳಗೆ ಸರ್ಕಾರಿ ಭೂಮಿ ಗುರುತಿಸುವ ಕೆಲಸ ಪೂರ್ಣಗೊಳಿಸಬೇಕು. ಒಂದು ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಇದ್ದು, ಈ ಸಂಬಂಧ ಯನ್ನು ನಿಯಮಾನುಸಾರ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

‘ಕೊಲ್ಲಿ ಯುದ್ದದ ಪರಿಣಾಮ ಅಡುಗೆ ಅನಿಲ ಸಿಲಿಂಡರ್ ಸಮಸ್ಯೆ ಉಂಟಾಗಿದ್ದು, ಕಾಳಸಂತೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಮಾರಾಟ ಮಾಡದಂತೆ ನಿಗಾ ವಹಿಸಬೇಕು. ಬೇಸಿಗೆ ಆರಂಭವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.

ತಹಶೀಲ್ದಾರ್ ಚೇತನಾ ಯಾದವ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಚಂದ್ರ, ತಾಲ್ಲೂಕು ಯೋಜನಾಧಿಕಾರಿ ಎಂ.ಎಂ. ತ್ರಿವೇಣಿ, ಎಇಇಗಳಾದ ಜಸ್ವಂತ್, ಸೌಮ್ಯಾ, ಸಿಡಿಪಿಒ ಎಸ್. ಸಕಲೇಶ್ವರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎನ್. ಪ್ರಿಯದರ್ಶಿನಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್, ಸಮಾಜ ಕಲ್ಯಾಣ ಅಧಿಕಾರಿ ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ವಿ. ನಂದೀಶ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣ ಹಾಗೂ ವಿವಿಧ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.