ಶ್ರೀರಂಗಪಟ್ಟಣ: ತಾಲ್ಲೂಕಿನ ಮುಂಡುಗದೊರೆ ವ್ಯಾಪ್ತಿಯ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಗೆ ಸ್ಥಳಕ್ಕೆ ಶುಕ್ರವಾರ ದಾಳಿ ನಡೆಸಿರುವ ಅಧಿಕಾರಿಗಳ ತಂಡ ಸ್ಫೋಟಕ ವಸ್ತು, ಇಟಾಚಿ ಮತ್ತು ಕಂಪ್ರೆಷರ್ ಯಂತ್ರಗಳನ್ನು ವಶಪಡಿಸಿಕೊಂಡಿದೆ.

ತಹಶೀಲ್ದಾರ್ ಚೇತನಾ ಯಾದವ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹಾಯಕ ಅಧಿಕಾರಿ ರಜಿನಿ, ಸಿಪಿಐ ವಿವೇಕಾನಂದ ನೇತೃತ್ವದ ತಂಡ ದಾಳಿ ನಡೆಸಿದ್ದು ಎರಡು ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಮೂರು ಇಟಾಚಿ ಯಂತ್ರಗಳು, ಕಲ್ಲು ಬಂಡೆ ಕೊರೆಯುವ ಎರಡು ಕಂಪ್ರೆಷರ್ ಯಂತ್ರಗಳು ಹಾಗೂ ಸ್ಫೋಟಕ್ಕೆ ಬಳಸುವ ಟ್ಯೂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮುಂಡುಗದೊರೆ ಗ್ರಾಮದ ಸ.ನಂ. 351ರ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆ ಬಗ್ಗೆ ಪ್ರಗತಿಪರ ಸಂಘಟನೆಗಳ ಮುಖಂಡರು ನೀಡಿದ ಮಾಹಿತಿ ಆಧರಿಸಿ ಈ ದಾಳಿ ನಡೆದಿದೆ. ‘ಹಂಗರಹಳ್ಳಿ ಗ್ರಾಮದ ಚೌಡೇಶ್ವರಿ ಜಲ್ಲಿ ಕ್ರಷರ್ ಮಾಲೀಕ ಪುನೀತ್ ಇತರರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ’ ಎಂದು ಅರಕೆರೆ ಠಾಣೆ ಪೊಲೀಸರು ತಿಳಿಸಿದ್ದಾರೆ.

‘ತಾಲ್ಲೂಕಿನ ಮುಂಡುಗದೊರೆ, ಹಂಗರಹಳ್ಳಿ, ಚನ್ನನಕೆರೆ, ಟಿ.ಎಂ. ಹೊಸೂರು ಇತರೆಡೆ ಕಲ್ಲು ಗಣಿಗಾರಿಕೆ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಆದರೂ ಕಲ್ಲು ಗಣಿಗಾರಿಕೆ ಅಡೆತಡೆಯಿಲ್ಲದೆ ನಡೆಯುತ್ತಿದೆ. ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು’ ಎಂದು ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜೇಶಗೌಡ ಆಗ್ರಹಿಸಿದರು.

ದಸಂದ ಮುಖಂಡ ಗಂಜಾಂ ರವಿಚಂದ್ರ, ಮುಂಡುಗದೊರೆ ಮೋಹನಕುಮಾರ್, ಕುಕ್ಕೂರು ರಾಜು, ಕೋಡಿಶೆಟ್ಟಿಪುರ ತೇಜಸ್, ಅಲ್ಲಾಪಟ್ಟಣ ಸಿದ್ದೇಗೌಡ, ಕೂಡಲಕುಪ್ಪೆ ತಮ್ಮಣ್ಣ ಇತರರು ಸ್ಥಳಕ್ಕೆ ಭೇಟಿ ನೀಡಿದ್ದರು. ‘ಗಣಿ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದೆ. ಅಕ್ರಮ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು. ನಿಷೇಧಾಜ್ಞೆ ಉಲ್ಲಂಘಿಸಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-40-1014416385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.