ಶ್ರೀರಂಗಪಟ್ಟಣ: ತಾಲ್ಲೂಕಿನ ನೆಲಮನೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ (ಎಂಪಿಸಿಎಸ್)ದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎನ್.ಡಿ. ಸುಧಾಕರ್ ಹಾಗೂ ಉಪಾಧ್ಯಕ್ಷರಾಗಿ ಎನ್.ಎಸ್. ನಿಂಗೇಗೌಡ ಶನಿವಾರ ಅವಿರೋಧವಾಗಿ ಆಯ್ಕೆಯಾದರು.

‘ಅಧ್ಯಕ್ಷ ಸ್ಥಾನಕ್ಕೆ ಎನ್.ಡಿ. ಸುಧಾಕರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಎಸ್. ನಿಂಗೇಗೌಡ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ವಸೀಂ ಪಾಷ ಪ್ರಕಟಿಸಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ. ಚಲುವೇಗೌಡ ಅಭಿನಂದಿಸಿದರು. ‘ಜೆಡಿಎಸ್ ಬೆಂಬಲಿತ ನಿರ್ದೇಶಕ ನಾಗರಾಜು ಅವರ ಸಹಕಾರದಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಸಾಮರಸ್ಯದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ’ ಎಂದು ಬಿ. ಚಲುವೇಗೌಡ ಹೇಳಿದರು.

ಸಂಘದ ನಿರ್ದೇಶಕರಾದ ಎನ್.ಕೆ. ಸಂತೋಷ್, ಎನ್. ಸುರೇಶ್, ನಾಗಮ್ಮ, ಮೀನಾಕ್ಷಿ, ನಾಗರಾಜು, ಟಿಎಪಿಸಿಎಂಎಸ್ ನಿರ್ದೇಶಕರಾದ ಸುಚಿತ್ರ ನಾಗೇಂದ್ರ, ನರಸಿಂಹೇಗೌಡ, ಮಾಜಿ ನಿರ್ದೇಶಕ ಕೆ. ಕೃಷ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ಶಿವನಂಜೇಗೌಡ, ಮುಖಂಡರಾದ ಎನ್.ಕೆ. ನಾಗೇಶ್, ಮಂಜುನಾಥ್, ಅರುಣಕುಮಾರ್, ಎನ್.ಆರ್. ಪ್ರಶಾಂತ್, ಎನ್. ಬಸವರಾಜು, ಎನ್.ಎಸ್. ರವಿಕುಮಾರ್, ಎಚ್. ಕೃಷ್ಣೇಗೌಡ, ಎನ್. ಎಂ. ಕಿರಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.