ಶ್ರೀರಂಗಪಟ್ಟಣ: ‘ಬೇಸಿಗೆಯ ಕಾರಣದಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ವಿದ್ಯುತ್ ಅಪವ್ಯಯ ತಪ್ಪಿಸುವ ಮೂಲಕ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳಬೇಕು’ ಎಂದು ಸೆಸ್ಕ್ ಅಧ್ಯಕ್ಷ, ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ₹1 ಕೋಟಿ ವೆಚ್ಚದ ಸೆಸ್ಕ್ ಶಾಖಾ ಕಚೇರಿ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಬೆಳಗೊಳ ಗ್ರಾಮದ ಸೆಸ್ಕ್ ಶಾಖಾ ಕಚೇರಿ ಕಟ್ಟಡಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಜಾಗ ನೀಡಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣ ಆಗಲಿದೆ. ಸೆಸ್ಕ್ನಿಂದ ಬೆಳಗೊಳ ಗ್ರಾಮವನ್ನು ಮಾದರಿ ಗ್ರಾಮ ಯೋಜನೆಗೆ ಆಯ್ಕೆ ಮಾಡಿದ್ದು ₹50 ಲಕ್ಷ ವೆಚ್ಚದಲ್ಲಿ ವಿದ್ಯುತ್ ಕಂಬ, ವಿದ್ಯುತ್ ಪರಿವರ್ತಕ ಬದಲಾವಣೆ ಕೆಲಸಗಳು ಪೂರ್ಣಗೊಂಡಿವೆ. ವಿದ್ಯುತ್ ಸರಬರಾಜಿನ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಗ್ರಾಮಕ್ಕೆ ಸಮಪರ್ಕ ಕುಡಿಯುವ ನೀರು ಕೊಡಲಾಗುತ್ತಿದೆ. ಬೆಳಗೊಳ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡವನ್ನು ಸಿಎಸ್ಆರ್ ನಿಧಿಯ ಹಣದಿಂದ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.

ಸೆಸ್ಕ್ ಎಇಇ ಎಂ. ಮಂಜುನಾಥಪ್ರಸಾದ್ ಮಾತನಾಡಿ, ‘ಬೆಳಗೊಳ ಸೆಸ್ಕ್ ಶಾಖಾ ಕಚೇರಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. ಸ್ವಂತ ಕಟ್ಟಡ ನಿರ್ಮಾಣಕ್ಕೆ ಸೆಸ್ಕ್ ಅಧ್ಯಕ್ಷರೂ ಆದ ಶಾಸಕ ರಮೇಶ ಬಂಡಿಸಿದ್ದೇಗೌಡ ಅನುದಾನ ಕೊಡಿಸಿದ್ದಾರೆ. ತಾಲ್ಲೂಕಿನ ಮಹದೇವಪುರ ಮತ್ತು ದರಸಗುಪ್ಪೆ ಶಾಖಾ ಕಚೇರಿಗಳ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿದೆ’ ಎಂದರು.

ಸೆಸ್ಕ್ ಸಹಾಯಕ ಎಂಜಿನಿಯರ್ ಸಂಪತ್, ಜೂನಿಯರ್ ಎಂಜಿನಿಯರ್ಗಳಾದ ನವೀನ್, ಸಂತೋಷ್, ನಾಗೇಂದ್ರ, ಯಜಮಾನ್ ಶ್ರೀನಿವಾಸೇಗೌಡ, ವಿಷಕಂಠೇಗೌಡ, ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ವಿ. ಸುರೇಶ್, ಬಿ. ರವಿಕುಮಾರ್, ಪುಟ್ಟರಾಜು, ಪಿಡಿಒ ಕುಳ್ಳೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಸ್ವಾಮಿಗೌಡ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರವೀಶ್, ಮುಖಂಡರಾದ ಮಂಜುನಾಥ್, ಎಂ.ಬಿ. ಕುಮಾರ್, ಬಳ್ಳಾರಿಗೌಡ, ಬಿ.ಎನ್. ರವಿಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-40-1591302164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.