ಶ್ರೀರಂಗಪಟ್ಟಣ: ತಾಲ್ಲೂಕಿನ ಗಡಿ ಭಾಗದ ನೊದೆಕೊಪ್ಪಲು ಗ್ರಾಮದ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಬರೆದಿದ್ದ ಪತ್ರಕ್ಕೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸ್ಪಂದಿಸಿದ್ದಾರೆ.

ನೊದೆಕೊಪ್ಪಲು ಬಳಿ ರೈಲ್ವೆ ಕೆಳ ಸೇತುವೆ ಕಿರಿದಾಗಿದ್ದು, ಲಾರಿ ಇತರ ಎತ್ತರದ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ನೀರು ನಿಲ್ಲುತ್ತದೆ. ವಿದ್ಯುತ್ ದೀಪಇಲ್ಲದೆ ಜನರಿಗೆ ತೊಂದರೆಯಾಗಿದ್ದು ಇಲ್ಲಿ ಮೇಲ್ಸೇತುವೆ ನಿರ್ಮಿಸಬೇಕು ಎಂದು ಸಚ್ಚಿದಾನಂದ ಮನವಿ ಮಾಡಿದ್ದರು.

ಶ್ರೀರಂಗಪಟ್ಟಣ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಪ್ಲಾಟ್ಫಾರ್ಮ್ ವಿಸ್ತರಿಸಬೇಕು. ಇಲ್ಲಿ ಕೇವಲ ಬೆರಳೆಣಿಕೆಯಷ್ಟು ರೈಲುಗಳು ನಿಲ್ಲಿಸುತ್ತಿದ್ದು, ಇತರ ನಾಲ್ಕೈದು ರೈಲುಗಳ ನಿಲುಗಡೆಗೆ ಕ್ರಮ ವಹಿಸಬೇಕು. ಇಂಡುವಾಳು ಬಳಿ ಕೆಳಸೇತುವೆ ನಿರ್ಮಿಸಬೇಕು. ಯಲಿಯೂರು ಸಮೀಪದ ಇರುವ ರೈಲ್ವೆ ಇಲಾಖೆಯ ಜಾಗವನ್ನು ಶಾಲಾ ಕ್ರೀಡಾಂಗಣಕ್ಕೆ ಬಿಟ್ಟುಕೊಡಬೇಕು. ರೈಲ್ವೆ ಗೂಡ್ಸ್ ಸ್ಟೇಷನ್ ಅನ್ನು ಯಲಿಯೂರು ಗ್ರಾಮದಲ್ಲಿ ಸ್ಥಾಪಿಸಬೇಕು’ ಎಂದು ಅವರು ಕೋರಿದ್ದರು.

ಈ ಮನವಿಗೆ ಸ್ಪಂದಿಸಿರುವ ಸಚಿವ ವಿ. ಸೋಮಣ್ಣ, ‘ನಿಯಮಾನುಸಾರ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಸಚ್ಚಿದಾನಂದ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-1714540176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.