ಶ್ರೀರಂಗಪಟ್ಟಣ: ಪಟ್ಟಣದಲ್ಲಿ ರೈಲುಗಳ ನಿಲುಗಡೆ ಮತ್ತು ರೈಲ್ವೆ ನಿಲ್ದಾಣಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ವಹಿಸುವಂತೆ ಪತ್ರ ಬರೆದಿದ್ದ ಪಟ್ಟಣದ ಬಿಜೆಪಿ ಮುಖಂಡ ಹಾಗೂ ಮೈಸೂರು ರೈಲ್ವೆ ವಿಭಾಗೀಯ ಸಲಹಾ ಸಮಿತಿ ಸದಸ್ಯ ಎಲ್. ಮಂಜುನಾಥ್ ಅವರ ಪತ್ರಕ್ಕೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಸ್ಪಂದಿಸಿ ಪತ್ರ ಬರೆದಿದ್ದಾರೆ.

‘ಶ್ರೀರಂಗಪಟ್ಟಣ ಪ್ರಸಿದ್ಧ ಪ್ರವಾಸಿ ಮತ್ತು ಯಾತ್ರಾ ಸ್ಥಳವಾಗಿದೆ. ಪ್ರತಿ ದಿನ ನೂರಾರು ಮಂದಿ ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಇಲ್ಲಿ ಮೂರ್ನಾಲ್ಕು ರೈಲುಗಳು ಮಾತ್ರ ನಿಲುಗಡೆ ಕೊಡುತ್ತವೆ. ಇದರಿಂದ ಪ್ರವಾಸಿಗರು ಮಾತ್ರವಲ್ಲದೆ ಸ್ಥಳೀಯರು ಮಂಡ್ಯ, ಮೈಸೂರು, ಬೆಂಗಳೂರು ಇತರ ಕಡೆ ಹೋಗಿ ಬರಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಮಂಜುನಾಥ್ ಪತ್ರ ಬರೆದು ಗಮನ ಸೆಳೆದಿದ್ದರು.

‘ಇಲ್ಲಿನ ರೈಲು ನಿಲ್ದಾಣದಲ್ಲಿ ಶೌಚಾಲಯ ನಿರ್ವಹಣೆ ಸರಿಯಿಲ್ಲ. ವಿಶ್ರಾಂತಿ ಕೊಠಡಿ ಕೂಡ ಇಲ್ಲ. ವಿದ್ಯುತ್ ಮತ್ತು ವಾಹನ ಪಾರ್ಕಿಂಗ್ ಸಮಸ್ಯೆಯೂ ಇದ್ದು, ಈ ಸಮಸ್ಯೆಗಳನ್ನು ಪರಿಹರಿಸಬೇಕು’ ಎಂದು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿ ಮಂಜುನಾಥ್ ಅವರಿಗೆ ಪತ್ರ ಬರೆದಿರುವ ಸಚಿವ ವಿ. ಸೋಮಣ್ಣ, ‘ಸೂಕ್ತ ಕ್ರಮಕ್ಕಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತೇನೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-40-108019215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.