ಶ್ರೀರಂಗಪಟ್ಟಣ: ‘ಕ್ಷೇತ್ರದಲ್ಲಿ ₹50 ಕೋಟಿಗೂ ಹೆಚ್ಚು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಶುರುವಾಗುವ ಮುನ್ನ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಭಾನುವಾರ ₹2.5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರುಮಾತನಾಡಿದರು.

‘ಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಮಾಡಲು ಉದ್ದೇಶಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಶೇ 50ರಷ್ಟು ರಸ್ತೆಗಳು ಅಭಿವೃದ್ಧಿಯಾಗಿವೆ. ಇನ್ನೆರಡು ವರ್ಷಗಳಲ್ಲಿ ಉಳಿದ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಮುಖ್ಯ ರಸ್ತೆಗಳು ಮಾತ್ರವಲ್ಲದೆ ಗ್ರಾಮೀಣ ಸಂಪರ್ಕ ರಸ್ತೆಗಳು ಕೂಡ ಅಭಿವೃದ್ಧಿಯಾಗಲಿವೆ. ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಹೇಳಿದರು.

‘ನಾಲೆಗಳ ಅಭಿವೃದ್ಧಿಗೆ ಸರ್ಕಾರ ಕೇಳಿದಷ್ಟು ಅನುದಾನ ಕೊಟ್ಟಿದೆ. ವಿರಿಜಾ, ಸಿಡಿಎಸ್, ಆರ್ಬಿಎಲ್ಎಲ್, ದೇವರಾಯ, ರಾಜಪರಮೇಶ್ವರಿ ಮತ್ತು ಬಂಗಾರದೊಡ್ಡಿ ನಾಲೆಗಳು ಅಭಿವೃದ್ಧಿಯಾಗಿವೆ. ನಾಲಾ ತೂಬುಗಳು ಮತ್ತು ವಿತರಣಾ ನಾಲೆಗಳ ಅಭಿವೃದ್ಧಿ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಅಗತ್ಯ ಇರುವ ಕಡೆ ಕಿರು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ’ ಎಂದರು.

ತಾ.ಪಂ. ಮಾಜಿ ಸದಸ್ಯ ಸಂತೋಷ್, ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಕೆ. ಮಂಜುನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಮಾಶಂಕರ್, ಟಿಎಪಿಸಿಎಂಎಸ್ ನಿರ್ದೇಶಕ ಶಿವಯ್ಯ, ಮುಖಂಡರಾದ ಸಿದ್ದರಾಜು, ಮರಿಸ್ವಾಮಿ, ದಿವಾಕರ್, ಉದಯಕುಮಾರ್, ಲೋಕೇಶ್, ಬೋರೇಗೌಡ, ಕರೀಗೌಡ, ಎಇಇ ಜಸ್ವಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-40-1867661097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.