ಶ್ರೀರಂಗಪಟ್ಟಣ: ‘ಮಕ್ಕಳ ದೈಹಿಕ ಮತ್ತು ಮನೋ ವಿಕಾಸದ ದೃಷ್ಟಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳಿಗೆ ಆಯಾ ಕ್ಷೇತ್ರಗಳ ಶಾಸಕರು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸಲಹೆ ನೀಡಿದರು.

ತಾಲ್ಲೂಕಿನ ಪಾಲಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ಮಾಹಿತಿ ಕೇಂದ್ರ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ‘ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ’ಕ್ಕೆ ಮಂಗಳವಾರ ಭೇಟಿ ನೀಡಿ ಶಿಬಿರಾರ್ಥಿಗಳ ಜತೆ ಅವರು ಚರ್ಚಿಸಿದರು.

‘ಮಕ್ಕಳಲ್ಲಿ ಕ್ರೀಡೆ, ಸಂಸ್ಕೃತಿ, ವಿಜ್ಞಾನ, ಜಾನಪದ ಕಲೆ, ಸಾಹಿತ್ಯದ ಬಗ್ಗೆ ಶಿಬಿರಗಳಲ್ಲಿ ಮಾಹಿತಿ ನೀಡುತ್ತಿದ್ದು, ಬೇಸಿಗೆ ರಜೆಯಲ್ಲಿ ಮಕ್ಕಳು ಮೊಬೈಲ್ ಮತ್ತು ಟಿವಿ ವೀಕ್ಷಣೆಯ ಚಟಕ್ಕೆ ಅಂಟಿಕೊಳ್ಳುವುದನ್ನು ತಡೆಯಲು ಈ ಶಿಬಿರಗಳು ಸಹಕಾರಿಯಾಗಿವೆ. ಜಿಲ್ಲೆಯಲ್ಲಿ ಏ.17ರಿಂದ ಶಿಬಿರಗಳು ಆರಂಭವಾಗಿದ್ದು, ಆಯಾ ಕ್ಷೇತ್ರಗಳ ಶಾಸಕರು ಇಂತಹ ಶಿಬಿರಗಳಿಗೆ ಅಧಿಕಾರಿಗಳ ಜತೆ ಭೇಟಿ ನೀಡಬೇಕು’ ಎಂದರು.

ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ‘ಈ ಶಿಬಿರಗಳು ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಸೃಜನಶೀಲತೆ, ನಾಯಕತ್ವ ಗುಣ, ಸಂಶೋಧನಾ ಪ್ರವೃತ್ತಿಯನ್ನು ಹೆಚ್ಚಿಸುತ್ತವೆ. ಒಂದು ತಿಂಗಳು ನಡೆಯುವ ಈ ಶಿಬಿರಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಬೇಕು. ಶಿಬಿರಗಳು ಯಶಸ್ವಿಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳುವವರು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಎಸ್. ನಂದೀಶ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಎಸ್. ಚಂದ್ರಶೇಖರ್, ತಾಲ್ಲೂಕು ಯೋಜನಾಧಿಕಾರಿ ಎಂ.ಎಂ. ತ್ರಿವೇಣಿ, ಸಿಡಿಪಿಒ ಸಕಲೇಶ್ವರ್, ಎಇಇ ಮಂಜುನಾಥ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ ಚಂದ್ರು, ಮುಖಂಡರಾದ ಗೋವಿಂದರಾಜು, ರಾಮೇಗೌಡ, ರೇಖಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-1463277524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.