ಶ್ರೀರಂಗಪಟ್ಟಣ: ‘ಕ್ಷಯ ವಾಸಿಯಾಗಬಲ್ಲ ಕಾಯಿಲೆಯಾಗಿದ್ದು, ರೋಗದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಚಿಕಿತ್ಸೆ ಪಡೆದರೆ ಶೇ 100ರಷ್ಟು ಗುಣವಾಗಬಹುದು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.

ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿ ಹಾಗೂ ಸ್ಥಳೀಯ ನಮ್ಮ ಕ್ಲಿನಿಕ್ ವತಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಬುಧವಾರ ನಡೆದ ‘ಟಿಬಿ ಮುಕ್ತ ಭಾರತ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ಷಯ ಬ್ಯಾಕ್ಟೀರಿಯಾದಿಂದ ಬರುವ ರೋಗವಾಗಿದ್ದು ಶ್ವಾಸಕೋಶಕ್ಕೆ ಸಮಸ್ಯೆಯಾಗುತ್ತದೆ. ರೋಗಿಯು ಕೆಮ್ಮುವಾಗ, ಸೀನುವಾಗ ಇತರರಿಗೆ ಹರಡುತ್ತದೆ. ಹಾಗಾಗಿ ಈ ರೋಗ ಇರುವರು ಪ್ರತ್ಯೇಕವಾಗಿ ಇದ್ದು ಚಿಕಿತ್ಸೆ ಪಡೆಯಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ 100 ದಿನಗಳ ಕಾಲ ಟಿಬಿ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದ್ದು ಸಂಘ, ಸಂಸ್ಥೆಗಳು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್ ಮಾತನಾಡಿ, ‘ಒಂದು ವಾರಕ್ಕಿಂತ ಹೆಚ್ಚು ದಿನ ಕೆಮ್ಮು, ಕಫದಲ್ಲಿ ರಕ್ತ, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು ಕ್ಷಯರೋಗದ ಪ್ರಮುಖ ಲಕ್ಷಣಗಲಾಗಿವೆ. ಈ ಕಾಯಿಲೆಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಂ.ಬಿ. ಕುಮಾರ್, ಕ್ಷಯರೋಗ ಮೇಲ್ವಿಚಾರಕ ಮಹೇಶ್, ನಮ್ಮ ಕ್ಲಿನಿಕ್ ಆರೋಗ್ಯ ನಿರೀಕ್ಷಣಾಧಿಕಾರಿ ಮೇಘನಾ, ಶುಶ್ರೂಷಣಾಧಿಕಾರಿ ಕೋಮಲ, ಮುಖಂಡರಾದ ರವಿಕುಮಾರ್, ವೆಂಕಟೇಶ್, ರಚರ್ಡ್, ಹರೀಶ್ ಪಾಲ್ಗೊಂಡಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-40-456320840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.