ಶ್ರೀರಂಗನಾಥಸ್ವಾಮಿ ದೇವಾಲಯದ ಎಡ ಪಾರ್ಶ್ವದಲ್ಲಿರುವ ಕಲ್ಯಾಣಿಯ ಮೆಟ್ಟಿಲುಗಳ ಮೇಲೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಶಿಲಾ ಶಾಸನ
ಕೊಳಕ್ಕೆ ಕಾಯಕಲ್ಪ ನೀಡುವ ಸಂಬಂಧ ಶಾಸಕರ ಜತೆ ಚರ್ಚಿಸಲಾಗಿದೆ. ಮಾಸ್ಟರ್ ಪ್ಲಾನ್ ಕೂಡ ಸಿದ್ಧಪಡಿಸಲಾಗಿದೆ. ಅದನ್ನು ಪರಿಷ್ಕರಿಸಬೇಕು ಎಂಬ ಸಲಹೆ ಬಂದಿದೆ. ಒಂದೆರಡು ತಿಂಗಳಲ್ಲಿ ಈ ಕೊಳಕ್ಕೆ ಕಾಯಕಲ್ಪ ನೀಡುವ ಕಾರ್ಯ ಆರಂಭವಾಗಲಿದೆ’
ಉಮಾ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ
ಗಜೇಂದ್ರ ಮೋಕ್ಷ ಕೊಳ ಶ್ರೀರಂಗನಾಥಸ್ವಾಮಿ ದೇವಾಲಯದ ಅವಿಭಾಜ್ಯ ಅಂಗ. ಆದರೆ ಈ ಐತಿಹಾಸಿಕ ಮಹತ್ವದ ಕೊಳವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ತಿಂಗಳಿಗೆ ಒಮ್ಮೆಯಾದರೂ ಈ ಕೊಳವನ್ನು ಸ್ವಚ್ಛಗೊಳಿಸಬೇಕು