ಶ್ರೀರಂಗಪಟ್ಟಣ: ಪಟ್ಟಣ ಸೇರಿದಂತೆ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಮಹಮದ್ ಯಾಸೀನ್ ಮತ್ತು ಶಾಹೀಲ್ಖಾನ್ ಅವರನ್ನು ಬಂಧಿಸಿದ್ದು, ಅವರು ಕಳವು ಮಾಡಿದ್ದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಪಟ್ಟಣದ ಕಮಲ್ಯಾ ವಿಹಾರ ಬಡಾವಣೆಯಲ್ಲಿ ಎರಡು, ಇಲ್ಲಿಗೆ ಸಮೀಪದ ಗಂಜಾಂನಲ್ಲಿ ಎರಡು ಹಾಗೂ ಮೈಸೂರಿನ ವರುಣಾ ಪೊಲೀಸ್ ಠಾಣೆಯ ಮೆಲ್ಲಹಳ್ಳಿ ಮತ್ತು ಹುಣಸೂರಿನಲ್ಲಿ ತಲಾ ಒಂದು ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದರು.

ಎಸ್ಪಿ ಶೋಭಾರಾಣಿ ವಿ.ಜೆ ಹಾಗೂ ಡಿವೈಎಸ್ಪಿ ಯು.ಡಿ. ಕೃಷ್ಣಕುಮಾರ್ ಅವರ ಮಾರ್ಗದರ್ಶನದಲ್ಲಿ ಆರೋಪಿಗಳ ಬಂಧನಕ್ಕೆ ತಂಡವನ್ನು ರಚಿಸಲಾಗಿತ್ತು. ಸಿಪಿಐ ಬಿ.ಜಿ. ಕುಮಾರ್ ಮತ್ತು ಮಹಿಳಾ ಪಿಎಸ್ಐ ಜನಾಬಾಯಿ ಕಡಪಟ್ಟಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಬಿ.ಜಿ. ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.