ಶ್ರೀರಂಗಪಟ್ಟಣ: ‘ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸರ್ಕಾರದ ಸವಲತ್ತುಗಳಿಂದ ವಂಚಿತರಾಗಬೇಕಾತ್ತದೆ. ಹಾಗಾಗಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐರ್) ಸಂದರ್ಭದಲ್ಲಿ ಎಲ್ಲ ಅರ್ಹರೂ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಿ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ₹3 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ನಮ್ಮ ಕ್ಷೇತ್ರದಲ್ಲಿ ಇದುವರೆಗೆ ಶೇ 92ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಇನ್ನೂ ಶೇ 8ರಷ್ಟು ಉಳಿದಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟರೆ ಸಾಕಷ್ಟು ಅವಕಾಶಗಳಿಂದ ವಂಚಿತರಾಗಬೇಕಾಗುತ್ತದೆ. ಎಸ್ಐಆರ್ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ನಿಗದಿತ ಅವಧಿಯಲ್ಲಿ ಮ್ಯಾಪಿಂಗ್ ಕಾರ್ಯವನ್ನು ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘2027ರ ಫೆ1ರಿಂದ ಫೆ28ರವರೆಗೆ ನಡೆಯಲಿರುವ ಜನಗಣತಿ ಹಿನ್ನೆಲೆಯಲ್ಲಿ ಗುರುವಾರದಿಂದ ಕ್ಷೇತ್ರದಾದ್ಯಂತ ಮನೆ ಗಣತಿ ಕಾರ್ಯ ಆರಂಭವಾಗಿದ್ದು, ಮನೆ ಗಣತಿಗೆ ಬರುವ ಅಧಿಕಾರಿಗಳಿಗೆ ಜನರು ನಿಖರ ಮಾಹಿತಿ ನೀಡಬೇಕು. ಗಣತಿದಾರರು ಅಧಿಕೃತ ಮಾಹಿತಿಯನ್ನು ದಾಖಲಿಸಬೇಕು’ ಎಂದು ತಿಳಿಸಿದರು.

ಹೆಬ್ಬಾಡಿ ಗ್ರಾಮಕ್ಕೆ ಮೈಸೂರಿನಿಂದ ಸಕಾಲಕ್ಕೆ ಬಸ್ಗಳು ಬರುತ್ತಿಲ್ಲ ಎಂದು ಜನರು ಸಮಸ್ಯೆ ತೋಡಿಕೊಂಡರು. ಮೈಸೂರು ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಕರ ಜತೆ ಮಾತನಾಡಿದ ರಮೇಶ ಬಂಡಿಸಿದ್ದೇಗೌಡ, ‘ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಿ’ ಎಂದು ಸೂಚಿಸಿದರು.

‘ಗ್ರಾಮದ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಜತೆಗೆ ಅಂಬೇಡ್ಕರ್ ಭವನ ನಿರ್ಮಿಸಲು ಅಗತ್ಯ ಜಾಗ ಮತ್ತು ಅನುದಾನ ನೀಡಲಾಗುವುದು. ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಚೇತನಾ ಯಾದವ್ ಮಾತನಾಡಿ, ‘ಕ್ಷೇತ್ರದಲ್ಲಿ ಏ16ರಿಂದ ಮೇ 15ರವರೆಗೆ ಮನೆ ಗಣತಿ ಕಾರ್ಯ ನಡೆಯಲಿದೆ. ನಿಗದಿತ ಅವಧಿಯಲ್ಲಿ ಗಣತಿ ಕಾರ್ಯ ಮುಗಿಸುವಂತೆ ಗಣತಿದಾರರಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ’ ಎಂದರು.

ಉಪ ತಹಶೀಲ್ದಾರ್ ನವೀನ್ ಕುಮಾರ್, ಕಂದಾಯ ನಿರೀಕ್ಷಕ ಟಿ.ಪಿ. ರೇವಣ್ಣ, ಸಾಂಖ್ಯಿಕ ನಿರೀಕ್ಷಕ ಎಂ. ಪ್ರಶಾಂತಕುಮಾರ್, ಎಇಇ ಜಸ್ವಂತ್, ಟಿಎಪಿಸಿಎಂಎಸ್ ನಿರ್ದೇಶಕ ಶಿವಯ್ಯ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ. ಸದಾಶಿವ, ಮಾಜಿ ಉಪಾಧ್ಯಕ್ಷ ಪುಟ್ಟಸ್ವಾಮಿ, ಗಣತಿ ಕಾರ್ಯದ ಮೇಲ್ವಿಚಾರಕ ಶ್ರೀಕಾಂತ್, ಮಾಸ್ಟರ್ ಟ್ರೇನರ್ ಮಹಮದ್ ಆಸಿಫ್ ಹುಸೇನ್, ಯಜಮಾನ್ ಮಹದೇವಸ್ವಾಮಿ, ಶಿವಕುಮಾರ್, ಶಿವಮಲ್ಲು, ಲಕ್ಷ್ಮಣ, ಈಶ್ವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-207578531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.