ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀರಂಗಪಟ್ಟಣ: ಗೋಡೆ ಕುಸಿದು‌ ಮಹಿಳೆ ಸಾವು

Published 5 ಸೆಪ್ಟೆಂಬರ್ 2024, 8:38 IST
Last Updated 5 ಸೆಪ್ಟೆಂಬರ್ 2024, 8:38 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಮನೆಯೊಂದರ ಗೋಡೆ ಕುಸಿದು‌ ಮಹಿಳೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆಲಮನೆ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಎನ್.ಸಿ. ರಾಜಕುಮಾರ್ ಅವರ ಪತ್ನಿ ಶಾಂತಮ್ಮ (45) ಮೃತಪಟ್ಟಿದ್ದಾರೆ.

ಗ್ರಾಮದ ಬಳಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ವಿತರಣಾ ನಾಲೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಶಾಂತಮ್ಮ ಅವರ ಮೇಲೆ 6 ಅಡಿ ಎತ್ತರದ, 20 ಅಡಿ ಉದ್ದದ ಗೋಡೆ ದಿಢೀರ್ ಕುಸಿದಿದೆ.

ಶಾಂತಮ್ಮ ಗೋಡೆಯ ಅವಶೇಷಗಳ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಬು ಎಂಬುವರ ಮನೆಯ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಕಂದಾಯ ನಿರೀಕ್ಷಕ ಭಾಸ್ಕರ್, ಗ್ರಾಮಾಡಳಿತ ಅಧಿಕಾರಿ ಸುಹಾಸ್ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT