ಶ್ರೀರಂಗಪಟ್ಟಣ: ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಪಟ್ಟಣದ ಬಳಿ ಬುಧವಾರ ಕಾವೇರಿ ನದಿಗೆ ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದರು.

ತಿ. ನರಸೀಪುರ ತಾಲ್ಲೂಕು ನಾಗಲಗೆರೆ ಗ್ರಾಮದ ವನಿತಾ (35) ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ನದಿಗೆ ಹಾರಿದ್ದರು. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ವಿಷಯ ಮುಟ್ಟಿಸಿದರು. ಅವರು ಬರುವಷ್ಟರಲ್ಲಿ ಅನಿತಾ ನೀರಿನ ಸೆಳೆತಕ್ಕೆ ಸಿಕ್ಕಿ 200 ಮೀಟರ್ ದೂರ ಕೊಚ್ಚಿ ಹೋಗಿದ್ದರು.

ಫೈಬರ್ ದೋಣಿಯಲ್ಲಿ ಕುಳಿತು ಕಾರ್ಯಾಚರಣೆ ನಡೆಸಿದ ಲೀಡಿಂಗ್ ಫೈರ್ ಫೈಟರ್ ಅನಂತ್ ಕೆ.ಎಂ, ಲೀಡಿಂಗ್ ಫೈಟರ್ ವೆಂಕಟೇಶ್.ಟಿ, ಸಿಬ್ಬಂದಿಗಳಾದ ಬಸವರಾಜ ಅಂಗಡಿ ಮತ್ತು ವಿಶ್ವಾಸ್ ಅವರ ತಂಡ ವನಿತಾ ಅವರನ್ನು ರಕ್ಷಿಸಿ ದಡಕ್ಕೆ ತಂದಿತು. ಅಸ್ವಸ್ಥರಾಗಿದ್ದ ವನಿತಾ ಅವರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-650298188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.