ಶ್ರೀರಂಗಪಟ್ಟಣ: ‘ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ ಹೆಚ್ಚುತ್ತಿದ್ದು, ದೇಸಿ ಕಲೆಗಳು ನಶಿಸುತ್ತಿವೆ. ಮುಂದಿನ ಪೀಳಿಗೆಗೆ ಈ ಕಲೆಯನ್ನು ದಾಟಿಸಬೇಕಾದರೆ ಮಕ್ಕಳಿಗೆ ದೇಸಿ ಕಲೆಗಳನ್ನು ಕಲಿಸಬೇಕು’ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಂ. ನಾಗರಾಜು ಸಲಹೆ ನೀಡಿದರು.

ತಾಲ್ಲೂಕಿನ ಸಬ್ಬನಕುಪ್ಪೆ ಗ್ರಾಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಗ್ರಾ.ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರ ‘ಅಕ್ಕರೆಯ ಅಂಗಳ’ದ ಶಿಬಿರಾರ್ಥಿಗಳಿಗೆ ಎ.ಎಸ್. ಬಂಡಿಸಿದ್ದೇಗೌಡ ಪ್ರತಿಷ್ಠಾನ ನೀಡಿರುವ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು.

‘ಜನ ಜೀವನದ ಜತೆ ಹಾಸುಹೊಕ್ಕಾಗಿದ್ದ ಜನಪದ ಗೀತೆಗಳು, ಜನಪದ ನೃತ್ಯಗಳು, ಸುಗ್ಗಿ ಹಾಡಿಗಳು ಅಡಗೂಲಜ್ಜಿ ಕತೆಗಳು, ಕೃಷಿ ಚಟುವಟಿಕೆಯ ಜತೆ ಜತೆಗೇ ನಡೆಯುತ್ತಿದ್ದ ಹಳ್ಳಿಯ ಆಟೋಟಗಳು ನೇಪಥ್ಯಕ್ಕೆ ಸರಿಯುತ್ತಿವೆ. ಕ್ರಿಕೆಟ್ ಮತ್ತು ಚಲನಚಿತ್ರಗಳ ಪ್ರಭಾವದಿಂದ ನಮ್ಮ ಮೂಲ ಸಂಸ್ಕೃತಿಗೆ ಪೆಟ್ಟು ಬೀಳುತ್ತಿದೆ. ಮೊಬೈಲ್ ಮತ್ತು ಟಿವಿ ವೀಕ್ಷಣೆ ಮಕ್ಕಳ ಸೃಜನಶೀಲತೆಯ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸಬೇಕು’ ಎಂದರು.

ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕ ಮಂಜುನಾಥ್ ಮಾತನಾಡಿ, ‘ಶಿಬಿರದಲ್ಲಿ 30ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದು ಕಲೆ, ಸಾಹಿತ್ಯ, ಸಂಸ್ಕೃತಿಯ ಜತೆಗೆ ಆಧುನಿಕ ಶಿಕ್ಷಣ ಪದ್ಧತಿ ಕಲಿಸಲಾಗುತ್ತಿದೆ. ಶಿಬಿರಾರ್ಥಿಗಳಿಗೆ ಎ.ಎಸ್. ಬಂಡಿಸಿದ್ದೇಗೌಡ ಪ್ರತಿಷ್ಠಾನ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ನೀಡಿರುವುದು ಶಿಬಿರ ಯಶಸ್ಸಿಗೆ ನೆರವಾಗಲಿದೆ’ ಎಂದರು.

ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಸ್.ಕೆ. ಶಿವಣ್ಣ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಎಂ. ಮಲ್ಲೇಶ್, ಚಂದ್ರಶೇಖರ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಎನ್.ಎಂ. ಬೃಂದಾಮಣಿ, ಗ್ರಾ.ಪಂ. ಪಿಡಿಒ ನಾರಾಯಣ, ಕಾರ್ಯದರ್ಶಿ ತಮ್ಮಣ್ಣ ಹಾಗೂ ಸರ್ಕಾರಿ ಶಾಲೆಯ ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-40-1685208122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.