ಶ್ರೀರಂಗಪಟ್ಟಣ: ‘ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುವ ಮುನ್ನ ವೈದ್ಯರ ಅರ್ಹತೆ ಬಗ್ಗೆ ತಿಳಿದುಕೊಳ್ಳಬೇಕು’ ಎಂದು ಪಟ್ಟಣದ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಎ.ಎಸ್. ಸೂರ್ಯ ತಿಳಿಸಿದರು.

ಪಟ್ಟಣದ ರಂಗನಾಥನಗರದಲ್ಲಿರುವ ನಮ್ಮ ಕ್ಲಿನಿಕ್ ಆವರಣದಲ್ಲಿ ಆರೋಗ್ಯ ಇಲಾಖೆ ಈಚೆಗೆ ಏರ್ಪಡಿಸಿದ್ದ ವಿಶ್ವ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ‘ನಕಲಿ ವೈದ್ಯರ ಬಗ್ಗೆ ಅಲ್ಲಲ್ಲಿ ವರದಿಗಳು ಬರುತ್ತಲೇ ಇವೆ. ಅರ್ಹತೆ ಇಲ್ಲದಿದ್ದರೂ ಹಣದ ಆಸೆಗಾಗಿ ಕೆಲವರು ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಂತಹವರಿಂದ ಚಿಕಿತ್ಸೆ ಪಡೆದರೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಅಪಾಯ ಇರುತ್ತದೆ. ನಕಲಿ ವೈದ್ಯರ ಬಗ್ಗೆ ಮಾಹಿತಿ ಸಿಕ್ಕದರೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬೇಕು’ ಎಂದು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ‘ಆರೋಗ್ಯ ಕೇವಲ ದೇಹಕ್ಕೆ ಸಂಬಂಧಿಸಿದ್ದಲ್ಲ. ವ್ಯಕ್ತಿ ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಭಾವನಾತ್ಮಕವಾಗಿ ಸದೃಢರಾಗಿರಬೇಕು. ಪ್ರತಿ ದಿನ ಕನಿಷ್ಠ 30 ನಿಮಿಷ ನಡೆದಾಡಬೇಕು. ಪೌಷ್ಟಿಕ ಮತ್ತು ಆರೋಗ್ಯಕರವಾದ ಆಹಾರ ಸೇವಿಸಬೇಕು. ದಿನಕ್ಕೆ 4 ಲೀಟರ್ನಷ್ಟು ಶುದ್ಧ ನೀರು ಕುಡಿಯುಬೇಕು. ತಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಆರೋಗ್ಯ ಇಲಾಖೆಯಿಂದ ಜನರಿಗೆ ಸಿಗುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಮೇಘನಾ, ಕಿರಿಯ ದರ್ಜೆ ಸಹಾಯಕಿ ಮಹಾಲಕ್ಷ್ಮಿ, ಧನಲಕ್ಷ್ಮಿ ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-40-59300285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.