ಮಂಡ್ಯ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 18ರಿಂದ ಏ.2ರವರೆಗೆ ನಡೆಯಲಿದೆ. ಜಿಲ್ಲೆಯಾದ್ಯಂತ ತೆರೆದಿರುವ 62 ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನ ವ್ಯವಸ್ಥೆ ಮಾಡಲಾಗಿದೆ.

ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕ ಮತ್ತು ನ್ಯಾಯಸಮ್ಮತ ಪರೀಕ್ಷೆ ನಡೆಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಹೊಸದಾಗಿ 9,467 ಗಂಡು ಮಕ್ಕಳು ಮತ್ತು 9,348 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 18,815 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಖಾಸಗಿ, ಪುನರಾವರ್ತಿತ, ವಿಶೇಷಚೇತನರು ಸೇರಿದಂತೆ ಒಟ್ಟು 20,669 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.

ಮಾರ್ಗಗಳ ಸಂಖ್ಯೆ:

ಜಿಲ್ಲೆಯ ಎಂಟು ಶೈಕ್ಷಣಿಕ ವಲಯಗಳಲ್ಲಿ ಒಟ್ಟು 27 ಮಾರ್ಗಗಳನ್ನು ಪ್ರಶ್ನೆಪತ್ರಿಕೆ ವಿತರಣೆಗೆ ಗುರುತಿಸಲಾಗಿದ್ದು, ಪ್ರತಿ ಮಾರ್ಗಕ್ಕೆ ಇಬ್ಬರಂತೆ ಮಾರ್ಗಾಧಿಕಾರಿಗಳನ್ನು ತಾಲ್ಲೂಕು ಹಂತದಲ್ಲಿ ನೇಮಕ ಮಾಡಲಾಗಿದೆ. ಪರೀಕ್ಷಾ ಸಮಯವನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15 ನಿಗದಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಯನ್ನು ಪೊಲೀಸ್ ಬಿಗಿ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಸಿಸಿಟಿವಿ ಕ್ಯಾಮೆರಾ ಕಣ್ಗಾವಲು:

ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು ಸದರಿ ವೆಬ್ ಕಾಸ್ಟಿಂಗ್ ವೀಕ್ಷಿಸಲು ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ಸೂಕ್ಷ್ಮವಾಗಿ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ಎಲ್ಲಿಯೂ ನಕಲು ಮತ್ತು ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಾಕೀತು ಮಾಡಿದ್ದಾರೆ.

ಫಲಿತಾಂಶ ವೃದ್ಧಿಗೆ ಕ್ರಮ:

2024–25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ–1ರಲ್ಲಿ ಮಂಡ್ಯ ಜಿಲ್ಲೆಯು ಶೇ 69.27 ಫಲಿತಾಂಶ ಪಡೆದು, ರಾಜ್ಯಮಟ್ಟದ ಜಿಲ್ಲಾವಾರು ಹೋಲಿಕೆಯಲ್ಲಿ 12ನೇ ಸ್ಥಾನ ಗಳಿಸಿತ್ತು. 2023–24ನೇ ಸಾಲಿನಲ್ಲಿ ಶೇ 74.54ರಷ್ಟು ಫಲಿತಾಂಶ ಪಡೆದು, 19ನೇ ಸ್ಥಾನ ಗಳಿಸಿತ್ತು.

ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಫಲಿತಾಂಶ ವೃದ್ಧಿಗೂ ವಿನೂತನ ಕಾರ್ಯಕ್ರಮ ಕೈಗೊಂಡಿದ್ದೆವು. ಈ ಬಾರಿ ಟಾಪ್–5 ಪಟ್ಟಿಯಲ್ಲಿ ಸ್ಥಾನ ಗಳಿಸುವ ನಿರೀಕ್ಷೆಯಿದೆ.
– ಜಿ.ಎ.ಲೋಕೇಶ್, ಡಿಡಿಪಿಐ, ಮಂಡ್ಯ

ಈ ಬಾರಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ವಿಶೇಷ ಆಸಕ್ತಿ ವಹಿಸಿ, ಜಿಲ್ಲೆಯ ಫಲಿತಾಂಶ ವೃದ್ಧಿಗೆ ಹಲವಾರು ಕ್ರಮಗಳನ್ನು ಕೈಗೊಳ್ಳುವಂತೆ ಡಿಡಿಪಿಐ ಅವರಿಗೆ ಸೂಚಿಸಿದ್ದರು. ಅದರಂತೆ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಫಲಿತಾಂಶ ಸುಧಾರಣೆಗಾಗಿ ‘ಮಿಷನ್ ಫಾರ್ಟಿ ಪ್ಲಸ್ ಇನ್ ನೈಂಟಿ ಡೇಸ್’ ಕಾರ್ಯಕ್ರಮ ರೂಪಿಸಲಾಗಿತ್ತು.

ಆರು ವಿಷಯಗಳಿಗೆ ಸಂಬಂಧಿಸಿದ ಬಹು ನಿರೀಕ್ಷಿತ ಪ್ರಶ್ನೋತ್ತರಗಳನ್ನು ಒಳಗೊಂಡ 172 ಪುಟಗಳ ‘ಕಲಿಕಾ ಮಿತ್ರ’ ಪುಸ್ತಕ ಮತ್ತು ವಿಷಯವಾರು 200 ಪುಟಗಳ 6 ನೋಟ್ಬುಕ್ಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗಿದೆ. 56 ನೋಡೆಲ್ ಅಧಿಕಾರಿಗಳನ್ನು ನೇಮಿಸಿ, ಫಲಿತಾಂಶ ವೃದ್ಧಿಗೆ ಪರಿಣಾಮಕಾರಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ ಎಂದು ಬಿಇಒಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.