ಮಂಗಳವಾರ, ಮಾರ್ಚ್ 2, 2021
23 °C

ಯಡಿಯೂರಪ್ಪ ಹೋರಾಟಗಾರ: ಎನ್‌.ಚಲುವರಾಯಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ‘ಬಿ.ಎಸ್‌.ಯಡಿಯೂರಪ್ಪ ಒಬ್ಬ ಹೋರಾಟಗಾರ. 105 ಸೀಟು ಗೆದ್ದರೂ ಮುಖ್ಯಮಂತ್ರಿಯಾಗಲು ಸಾಧ್ಯವಾಗದ ಅವರಿಗೆ, ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಆ ಅವಕಾಶ ಸಿಕ್ಕಿದೆ’ ಎಂದು ಕಾಂಗ್ರೆಸ್‌ ಮುಖಂಡ ಎನ್‌.ಚಲುವರಾಯಸ್ವಾಮಿ ಶನಿವಾರ ಇಲ್ಲಿ ಹೇಳಿದರು.

‘ನಮ್ಮ ಜಿಲ್ಲೆಯ ಮಗ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಮತ್ತೊಮ್ಮೆ ಈ ಅವಕಾಶ ಸಿಗುವುದು ಕಡಿಮೆ. ಹೀಗಾಗಿ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸಿ ಉತ್ತಮ ಆಡಳಿತ ನೀಡುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಉಪಚುನಾವಣೆ ಸ್ಪರ್ಧೆ ಇಲ್ಲ: ‘ನಾನು ಸಾರ್ವತ್ರಿಕ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ; ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಪಕ್ಷ ಉಸ್ತುವಾರಿಗಳನ್ನು ನೇಮಕ ಮಾಡಿದೆ. ನನಗೂ ಉಸ್ತುವಾರಿ ವಹಿಸಲಾಗಿದೆ. ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.