ಬುಧವಾರ, ಜೂನ್ 29, 2022
27 °C

ಬಿಜೆಪಿ ಬಲವರ್ಧನೆಗೆ ಶ್ರಮಿಸಿ: ಉಮೇಶ್ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮದ್ದೂರು: ‘ಜಿಲ್ಲೆಯಲ್ಲಿ ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ದುಡಿಯಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಸಲಹೆ ನೀಡಿದರು.

ಪಟ್ಟಣದ ಸೋಮೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಘಟ ನಾಯಕರು ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

‘ಜೂನ್‌ನಲ್ಲಿ ನಡೆಯುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಸ್ಪರ್ಧಿಸಿದ್ದು, ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಮನ್‌ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿ ಮಾತನಾಡಿ, ‘ಮೈ.ವಿ.ರವಿಶಂಕರ್ ಅವರಿಗೆ ತಾಲ್ಲೂಕಿನಲ್ಲಿ ಹೆಚ್ಚು ಮತಗಳು ಸಿಗುವಂತೆ ಕಾರ್ಯಕರ್ತರು ದುಡಿಯಬೇಕು’ ಎಂದು ಕರೆ ನೀಡಿದರು.

ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ.ಸದಾನಂದ, ಮಧು ಗಂಗಾಧರ್, ರಾಜ್ಯ ವಕ್ತಾರರಾದ ಮಹೇಶ್, ಮುಖಂಡರಾದ ಮರಿ ಹೆಗಡೆ, ಬೋರಯ್ಯ, ಹನುಮಂತು, ಚಿಕ್ಕಂಕನಹಳ್ಳಿ ಮನು, ತಾಲ್ಲೂಕು ಘಟಕದ ಕಿಸಾನ್ ಮೋರ್ಚಾ ಅಧ್ಯಕ್ಷ ಶಿವದಾಸ್ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ತಾಲ್ಲೂಕು ಕಾರ್ಯದರ್ಶಿ ಹೊನ್ನಲಗೆರೆ ಸ್ವಾಮಿ, ಕದಲೂರು ಸುರೇಶ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು