ಮಂಡ್ಯ: ಲಾರಿಯಲ್ಲಿ ಕಬ್ಬಿನ ತರಗು ತುಂಬಿಕೊಂಡು ಬರುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ, ಸುಟ್ಟು ಹೋಗಿರುವ ಘಟನೆ ತಾಲ್ಲೂಕಿನ ದೊಡ್ಡಬಾಣಸವಾಡಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ಸದ್ಯಕ್ಕೆ ಲಾರಿ ಚಾಲಕ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿಯು ಕೆರಗೋಡು ಮುಖ್ಯ ರಸ್ತೆಯಲ್ಲಿ ಮಂಡ್ಯ ಕಡೆಗೆ ಬರುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶವಾಗಿದೆ. ಇದರ ಪರಿಣಾಮ ಲಾರಿ ಹಾಗೂ ಕಬ್ಬಿನ ತರಗು ಸಂಪೂರ್ಣವಾಗಿ ಸುಟ್ಟುಹೋಗಿದೆ.

ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುವಷ್ಟರಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಬಹುತೇಕ ಲಾರಿಭಾಗ ಸುಟ್ಟುಕರಕಲಾಗಿದೆ.

ಸ್ಥಳಕ್ಕೆ ಕೆರಗೋಡು ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಕಾಶಿನಾಥ್ ಬಗಲಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.