ಬುಧವಾರ, ಜುಲೈ 28, 2021
29 °C

ಕೋವಿಡ್‌ ಪರೀಕ್ಷೆಗೆ ಮುಗಿಬಿದ್ದ ಸುಮಲತಾ ಬೆಂಬಲಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಸಂಸದೆ ಎ.ಸುಮಲತಾ ಅವರಿಗೆ ಕೋವಿಡ್‌–19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ನೂರಾರು ಮಂದಿ ಮಂಗಳವಾರ ಕೋವಿಡ್‌ ಪರೀಕ್ಷೆಗೆ ಮುಗಿ ಬಿದ್ದಿದ್ದರು.

ಸುಮಲತಾ ಅವರು ಜೂನ್‌ 30ರಿಂದ ಜುಲೈ 5ವರೆಗೆ ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಕಂಟೈನ್‌ಮೆಂಟ್‌ ಬಡಾವಣೆಗಳಿಗೂ ತೆರಳಿದ್ದರು. ಬೆಂಬಲಿಗರು, ವಿವಿಧ ಇಲಾಖೆಗಳ ಅಧಿಕಾರಿಗಳು ಅವರ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ ಪ್ರಥಮ ಹಾಗೂ ದ್ವಿತೀಯ ಹಂತದ ಸಂಪರ್ಕಿತರಿಗೆ ಮಂಗಳವಾರ ನಗರದ ಒಕ್ಕಲಿಗರ ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸ್ಯಾನಿಟೈಸ್‌: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಕೂಡ ಸಂಸದರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಜೊತೆಗೆ ಪಕ್ಕದಲ್ಲೇ ಇರುವ ಜಿಲ್ಲಾ ನ್ಯಾಯಾಲಯದಲ್ಲಿ 7 ಮಂದಿಗೆ ಕೋವಿಡ್‌ ದೃಢಪಟ್ಟಿರುವ ಕಾರಣ ಮಂಗಳವಾರ ಕಚೇರಿಗೆ ಸೋಂಕು ನಿವಾರಕ ಸಿಂಪಡಣೆ ಮಾಡಲಾಯಿತು.

ಬಾಲಕಿಯ ಪ್ರಾರ್ಥನೆ: ಸುಮಲತಾ ಅವರು ಬೇಗ ಗುಣಮಖರಾಗಲಿ ಎಂದು ಬಾಲಕಿಯೊಬ್ಬಳು ದೇವರಲ್ಲಿ ಪ್ರಾರ್ಥನೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು