ಮಂಡ್ಯ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಟ್ರಾಮಾ ಕೇರ್ ಸೆಂಟರ್’ ಸ್ಥಾಪಿಸಲು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿ.ಎಂ.ಎಸ್.ಎಸ್.ವೈ) ಮತ್ತು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿ.ಎಸ್.ಆರ್) ಅನುದಾನದಡಿ, 300 ಹಾಸಿಗೆಗಳನ್ನು ಒಳಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅಗತ್ಯವಾದ ₹350 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮಿಮ್ಸ್ ನಿರ್ದೇಶಕ ಡಾ.ಪಿ. ನರಸಿಂಹಸ್ವಾಮಿ ಪತ್ರ ಬರೆದಿದ್ದಾರೆ.

ಪಿ.ಎಂ.ಎಸ್.ಎಸ್. ಯೋಜನೆಯಡಿ ಈಗಾಗಲೇ ಬೆಂಗಳೂರು, ಹುಬ್ಬಳ್ಳಿ, ಬಳ್ಳಾರಿಯಲ್ಲಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಹಾಗೂ ಬಳ್ಳಾರಿಯಲ್ಲಿ ‘ಟ್ರಾಮಾ ಕೇರ್ ಸೆಂಟರ್’ ತೆರೆಯಲಾಗಿದೆ. ಇದೇ ರೀತಿ ಮಂಡ್ಯದಲ್ಲೂ ಆರಂಭಗೊಂಡರೆ ಇಲ್ಲಿಯ ಜನರಿಗೆ ತುರ್ತು ಮತ್ತು ಪರಿಣಾಮಕಾರಿ ಚಿಕಿತ್ಸೆ ಸಿಗುತ್ತದೆ. ಹೀಗಾಗಿ ಕೇಂದ್ರ ಸಚಿವ ಮತ್ತು ಮಂಡ್ಯ ಸಂಸದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಿಮ್ಸ್ ನಿರ್ದೇಶಕರು ಮನವಿ ಮಾಡಿ, ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಯದರ್ಶಿಗೆ ಪ್ರಸ್ತಾವ ಸಲ್ಲಿಸಿದ್ದಾರೆ.

ನಿತ್ಯ 2,500 ರೋಗಿಗಳು: ಮಂಡ್ಯದಲ್ಲಿ ‘ಮಿಮ್ಸ್’ 2006ರಲ್ಲಿ ಹಾಗೂ ಜಿಲ್ಲಾಸ್ಪತ್ರೆಯು 1940ರಲ್ಲಿ ಆರಂಭವಾಯಿತು. ಪ್ರಸ್ತುತ ಬೋಧಕ ಆಸ್ಪತ್ರೆಯು 850 ಹಾಸಿಗೆಗಳನ್ನು ಒಳಗೊಂಡಿದ್ದು, ನಿತ್ಯ 2200ರಿಂದ 2500 ಹೊರ ರೋಗಿಗಳು ಹಾಗೂ 150ರಿಂದ 200 ರೋಗಿಗಳು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗುತ್ತಾರೆ. ರೋಗಿಗಳ ದಟ್ಟಣೆಯಿಂದ ಆಸ್ಪತ್ರೆ
ತುಂಬಿ ತುಳುಕುತ್ತಿದ್ದು, ಗುಣಮಟ್ಟದ ಮತ್ತು ಹೆಚ್ಚಿನ ಚಿಕಿತ್ಸೆ ನೀಡಲು ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಜ್ಞ ವೈದ್ಯರ ಕೊರತೆ: 7 ತಾಲ್ಲೂಕುಗಳು ಮತ್ತು 18 ಲಕ್ಷ ಜನಸಂಖ್ಯೆ ಹೊಂದಿರುವ ಮಂಡ್ಯ ಜಿಲ್ಲೆಯ
ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞವೈದ್ಯರ ಕೊರತೆ ತೀವ್ರವಾಗಿ ಕಾಡುತ್ತಿದೆ. ಇತ್ತೀಚೆಗೆ ಹೃದ್ರೋಗ ಸಂಬಂಧಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರೂ, ಈ ಜಿಲ್ಲಾಸ್ಪತ್ರೆ
ಅಥವಾ ಬೋಧಕ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರೇ ಇಲ್ಲ. ಹೀಗಾಗಿ ಇಲ್ಲಿಗೆ ಬರುವ ರೋಗಿಗಳು ಇ.ಸಿ.ಜಿ ಮಾಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಹೃದ್ರೋಗ, ಮೂತ್ರನಾಳದ ಸೋಂಕು, ನರರೋಗ, ಶಸ್ತ್ರಚಿಕಿತ್ಸೆ ಹಾಗೂ ಪ್ಲಾಸ್ಟಿಕ್ ಸರ್ಜರಿಗೆ ಸಂಬಂಧಿಸಿದ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇವರಿಗೆ ಉತ್ತಮ ಚಿಕಿತ್ಸೆ ನೀಡಲು ತಜ್ಞವೈದ್ಯರ ತಂಡ ಬೇಕಾಗಿದೆ. ಹೀಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಗೊಂಡರೆ, ತಜ್ಞವೈದ್ಯರ ಕೊರತೆ ನೀಗುತ್ತದೆ ಎನ್ನುತ್ತಾರೆ ಇಲ್ಲಿಯ ವೈದ್ಯರು.

ಟ್ರಾಮಾ ಕೇರ್ ಸೆಂಟರ್ಗೆ ಬೇಡಿಕೆ

ಬೆಂಗಳೂರು– ಮೈಸೂರು ನೂತನ ಹೆದ್ದಾರಿ (ಎಕ್ಸ್ಪ್ರೆಸ್ ವೇ) ಆರಂಭವಾದ ನಂತರ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದ್ದು, ಗಾಯಾಳುಗಳು ತುರ್ತು ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಿಮ್ಸ್ ಬೋಧಕ ಆಸ್ಪತ್ರೆಗೆ ಬರುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಸಕಾಲದಲ್ಲಿ ಉತ್ತಮ ಚಿಕಿತ್ಸೆ ನೀಡುವುದು ವೈದ್ಯರಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳಿಗೆ ತ್ವರಿತ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ‘ಟ್ರಾಮಾ ಕೇರ್ ಸೆಂಟರ್’ ತೆರೆಯುವುದು ಅತ್ಯಗತ್ಯವಾಗಿದೆ ಎನ್ನುತ್ತಾರೆ ಮಿಮ್ಸ್ ವೈದ್ಯಾಧಿಕಾರಿಗಳು.

ತೆರೆಯಲಿರುವ ವಿಭಾಗಗಳು

ಹೃದ್ರೋಗ ವಿಭಾಗ, ಮಕ್ಕಳ ವಿಭಾಗ, ನರಚಿಕಿತ್ಸಾ ವಿಭಾಗ, ಪ್ಲಾಸ್ಟಿಕ್ ಸರ್ಜರಿ ಮತ್ತು ಸುಟ್ಟಗಾಯ, ನ್ಯೂರೊ ಸರ್ಜರಿ, ನೆಪ್ರಾಲಜಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಯೂರಾಲಜಿ, ಗ್ಯಾಸ್ಟ್ರೋಎಂಟ ರಾಲಜಿ, ಎಂಡೊಕ್ರಿನಾಲಜಿ, ಮೈಕ್ರೊ ವೆಸ್ಕ್ಯುಲರ್, ತುರ್ತು ಚಿಕಿತ್ಸಾ ಘಟಕ (ಐಸಿಯು) ಸೇರಿದಂತೆ ಒಟ್ಟು 12 ವಿಭಾಗಗಳನ್ನು ನೂತನವಾಗಿ ಆರಂಭವಾಗುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತೆರೆಯಲು ಉದ್ದೇಶಿಸಲಾಗಿದೆ.

300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಗಾಯಾಳುಗಳ ತುರ್ತು ಚಿಕಿತ್ಸೆಗಾಗಿ ‘ಟ್ರಾಮಾ ಕೇರ್ ಸೆಂಟರ್’ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.
- ಡಾ.ಪಿ.ನರಸಿಂಹಸ್ವಾಮಿ ನಿರ್ದೇಶಕ ಮಿಮ್ಸ್ ಮಂಡ್ಯ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾದರೆ, ಅದರ ಸ್ಥಾಪನೆಗೆ ಮಿಮ್ಸ್ ಆವರಣದಲ್ಲಿ ಜಾಗವೇ ಇಲ್ಲ. ತಮಿಳು ಕಾಲೊನಿ ನಿವಾಸಿಗಳ ಸ್ಥಳಾಂತರಕ್ಕೆ ತಕ್ಷಣ ಕ್ರಮ ಕೈಗೊಳ್ಳಲಿ.
– ಎಂ.ಬಿ.ನಾಗಣ್ಣಗೌಡ, ಮುಖಂಡ, ಕರುನಾಡ ಸೇವಕರು ಸಂಘಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.