ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಲಗೂರು: ಲಯನ್ಸ್ ಸದಸ್ಯರಿಂದ ಆಸ್ಪತ್ರೆ ಆವರಣದಲ್ಲಿ ಶ್ರಮದಾನ

Published : 22 ಸೆಪ್ಟೆಂಬರ್ 2024, 15:52 IST
Last Updated : 22 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ಹಲಗೂರು: ‘ಪ್ರತಿಯೊಬ್ಬರೂ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ’ ಎಂದು ಹಲಗೂರು ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ.ಕುಮಾರ್ ತಿಳಿಸಿದರು.

ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಭಾನುವಾರ ಕ್ಲಬ್ ಸದಸ್ಯರ ಜೊತೆಗೂಡಿ ನಡೆದ ಸ್ವಚ್ಛತಾ ಶ್ರಮದಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಹಸಿಕಸ ಮತ್ತು ಒಣಕಸ ಬೇರ್ಪಡಿಸಿ ಪಂಚಾಯಿತಿಯ ಕಸ ಸಂಸ್ಕರಣೆಗೆ ನೆರವಾಗಬೇಕು. ಸ್ವಚ್ಛತೆ ದೃಷ್ಟಿಯಿಂದ ಲಯನ್ ಸುಬ್ರಹ್ಮಣ್ಯ ಅವರ ನಿರ್ದೇಶನದಂತೆ ಇಂದು ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಿ.ಎಲ್.ಮಾದೇಗೌಡ, ಖಜಾಂಚಿ ಶಿವರಾಜು, ಸದಸ್ಯರಾದ ಎಚ್.ವಿ.ರಾಜು, ಗುರು ಸಿದ್ದು, ಮುನಿರಾಜು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT