ಮಂಡ್ಯ: ‘ಸ್ವಾಮಿ ವಿವೇಕಾನಂದರ ಆದರ್ಶ, ಚಿಂತನೆ, ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವ ಮೂಲಕ ದೇಶಕ್ಕೆ ಮಾದರಿ ವ್ಯಕ್ತಿಗಳಾಗಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮ ದಿನೋತ್ಸವದ ಅಂಗವಾಗಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಯುವ ದಿನ’ವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಅಮೆರಿಕದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ, ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಯುವಕ ಯುವತಿಯರಿಗೆ ಸ್ಪಷ್ಟವಾದ ಗುರಿ, ನಂಬಿಕೆ, ಆತ್ಮವಿಶ್ವಾಸ ಇರಬೇಕು. ಸಮಾಜದಲ್ಲಿ ಬುದ್ಧಿವಂತರಾಗಿ ಪ್ರಜ್ಞಾವಂತರಾಗಿ ಮತ್ತು ಹೃದಯವಂತಿಕೆಯಿಂದ ಬದುಕಬೇಕು ಎಂದು ಹೇಳಿದರು.

ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ. ಶಿವಚಿತ್ತಪ್ಪ ಮಾತನಾಡಿ, ‘ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ. ಎಷ್ಟು ವರ್ಷ ಸೇವೆ ಸಲ್ಲಿಸುತ್ತೇವೆ ಎಷ್ಟು ವರ್ಷ ಜೀವಿಸುತ್ತೇವೆ ಎನ್ನುವುದು ಮುಖ್ಯವಲ್ಲ ನಮ್ಮ ಅವಧಿಯಲ್ಲಿ ಎಷ್ಟು ಕೆಲಸ ಕಾರ್ಯಗಳು ಆಗಿವೆ ಎನ್ನುವುದು ಮುಖ್ಯ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವಿ.ಜೆ.ಮಾತನಾಡಿ, ‘ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಇತಿಹಾಸ ತಿಳಿಯದವರು ಇತಿಹಾಸವನ್ನು ಸೃಷ್ಟಿಸಲಾರರು. ಯುವ ಜನತೆ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ಯುವ ಜನಾಂಗ ಸ್ವಾಮಿ ವಿವೇಕಾನಂದರ ಆದರ್ಶ, ಮೌಲ್ಯಗಳನ್ನು ತಿಳಿದುಕೊಳ್ಳಬೇಕು ಎಂದರು.

ಅರ್ಕೇಶ್ವರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮನು ಗೊರವಾಲೆ ವಿವೇಕಾನಂದರ ಕುರಿತು ಉಪನ್ಯಾಸ ನೀಡಿದರು.

ಮಂಡ್ಯ ವಿವಿ ಕುಲಸಚಿವ ಕೃಷ್ಣಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜಕರಾದ ಪ್ರಮೀಳಾ ಎಂ.ಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.