ಶನಿವಾರ, ಜುಲೈ 2, 2022
25 °C
ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರೇಮನಿ ಸಲಹೆ

ಪರಿಷತ್‌ ಚುನಾವಣೆ ಗಂಭೀರವಾಗಿ ಪರಿಗಣಿಸಿ: ಜಗದೀಶ್‌ ಹಿರೇಮನಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ‘ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರೇಮನಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಘಟ ನಾಯಕರ ಸಭೆಯಲ್ಲಿ ಮಾತನಾಡಿದರು.

‘ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್‌ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಕೊಡಿಸಬೇಕು. ಮತದಾರರನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ಬಿ ಮತ್ತು ಸಿ ವರ್ಗದ ಮತದಾರರ ಮನವೊಲಿಸಬೇಕು’ ಎಂದು ಹೇಳಿದರು.

ಪಕ್ಷದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ ಮಾತನಾಡಿ, ಮೈ.ವಿ. ರವಿಶಂಕರ್ ಅವರು ಸರಳ ವ್ಯಕ್ತಿತ್ವದ ನಾಯಕ. ಅವರನ್ನು ಗೆಲ್ಲಿಸಲು ಶಕ್ತಿ ಮೀರಿ ಕೆಲಸ ಮಾಡಬೇಕು’ ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಪಿ. ಉಮೇಶ್‌, ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್‌. ರಮೇಶ್‌, ಪಕ್ಷದ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಎಸ್‌. ಸಿದ್ದರಾಮಯ್ಯ, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್‌. ನಂಜುಂಡೇಗೌಡ, ಜಿಲ್ಲಾ ಘಟಕದ ಉಪಾಧ್ಯಕ್ಷ ಟಿ. ಶ್ರೀಧರ್‌, ಕಾರ್ಯದರ್ಶಿ ಇಂದ್ರಕುಮಾರ್‌, ಪುರಸಭೆ ಸದಸ್ಯೆ ಪೂರ್ಣಿಮಾ ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು