ಮಂಡ್ಯ: ಸಚಿವ ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಬಿಜೆಪಿ ನಾಯಕರು ಅಪಪ್ರಚಾರ ಮಾಡಿ, ಸಂಬಂಧವಿಲ್ಲದ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಯ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ತಮಟೆ ಚಳವಳಿ ನಡೆಸಿದರು.

ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕೆಲ ಸಮಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ವಿವಿಧ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಪ್ರಿಯಾಂಕ್ ಖರ್ಗೆ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಸಂಘ ಪರಿವಾರದ ನಿಲುವುಗಳನ್ನು ಖಂಡಿಸುತ್ತಾ, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹೋರಾಡುತ್ತಿದ್ದರು. ಇದನ್ನೇ ವಿರೋಧಿಸಿ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಮೂರ್ತಿ ಸುಂಡಹಳ್ಳಿ ಮಂಜುನಾಥ್, ಎಲ್. ಸಂದೇಶ್, ಶ್ರೀಧರ್, ಸಿ.ಆರ್. ರಮೇಶ್, ಜೆ. ರಾಮಯ್ಯ, ಎಂ.ವಿ. ಕೃಷ್ಣ, ಎಚ್.ಡಿ. ಜಯರಾಂ, ಹಾಲಹಳ್ಳಿ ರುದ್ರಪ್ಪ, ವೀಣಾ ಶಂಕರ್, ಅಮ್ಜದ್ಪಾಷ, ಉಷಾ, ದೊಡ್ಡಯ್ಯ, ಆನಂದ್, ವಿಜಯಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

‘ಬಿಜೆಪಿಗೆ ತಕ್ಕ ಪಾಠ’

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿ ಬಿಜೆಪಿ ಮತ್ತು ಜೆಡಿಎಸ್ಗೆ ರಾಜ್ಯದ ಜನ ಉಪ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಮುಖಂಡರು ಸರ್ಕಾರ ಪತನದ ಅಪಪ್ರಚಾರವನ್ನು ಮಾಡುತ್ತಾ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಸಚಿವರ ರಾಜೀನಾಮೆ ಕೇಳುವುದನ್ನೇ ವೃತ್ತಿ ಮಾಡಿಕೊಂಡು ಇದನ್ನೇ ವಿರೋಧ ಪಕ್ಷದ ಕಾರ್ಯವೆಂದು ಪರಿಗಣಿಸಿದ್ದಾರೆ ಎಂದು ಕಿಡಿಕಾರಿದರು. ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಪಾಂಚಾಳ್ ಅವರ ಡೆತ್ನೋಟ್ನಲ್ಲಿ ಸಚಿವರ ಹೆಸರಿಲ್ಲದಿದ್ದರೂ ಅವರ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ ಇದನ್ನು ಬಿಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.