ಮಂಡ್ಯ: ಶಿಕ್ಷಕರ ಕೆಲಸ ಪುಣ್ಯದ ಕೆಲಸವಾಗಿದ್ದು, ಸಮಾಜದಲ್ಲಿ ಪೋಷಕರು ಮಕ್ಕಳ ಪಾಲನೆ ಮಾಡಿದರೆ, ಶಿಕ್ಷಕರು ಅವರ ಭವಿಷ್ಯ ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಲ್ಲನ್ನು ಮೂರ್ತಿಯಾಗಿ ಹೇಗೆ ಕೆತ್ತನೆ ಮಾಡುತ್ತಾರೋ ಅದೇ ರೀತಿ ಶಿಕ್ಷಕರಾದವರು ಮಕ್ಕಳನ್ನು ಸಮಾಜದಲ್ಲಿ ಸತ್ಪ್ರಜೆ ಮಾಡುವ ನಿಟ್ಟಿನಲ್ಲಿ ಸಾಗುತ್ತಿದ್ದಾರೆ. ಮಕ್ಕಳನ್ನು ಹೆತ್ತು, ಹೊತ್ತು ಪಾಲನೆ ಮಾಡುವ ಜವಾಬ್ದಾರಿ ಪೋಷಕರ ಮೇಲಿರುತ್ತದೆ. ಆದರೆ, ಅವರ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು ಎಂದು ಸ್ಮರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಶಿಕ್ಷಣದಲ್ಲಿ ಕಟ್ಟುನಿಟ್ಟಿನ ಬದಲಾವಣೆ ಆಗಿರುವುದರಿಂದಲೇ ಸಮಾಜದಲ್ಲಿ ಕ್ರೌರ್ಯಗಳು ಹೆಚ್ಚಾಗಿವೆ. ಪ್ರಾಚೀನ ಭಾರತೀಯ ಗುರುಕುಲ ಪದ್ಧತಿಯಲ್ಲಿದ್ದ ಸತ್ಯ, ಧರ್ಮ, ನ್ಯಾಯ ನೀತಿ ಒಳಗೊಂಡ ಆಧ್ಯಾತ್ಮಿಕ ಭಾವನೆಗಳು ಮರೆಯಾಗಿವೆ ಎಂದರು.

ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಶಿಕ್ಷಕರನ್ನುಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಾಸಕ ಎಂ.ಶ್ರೀನಿವಾಸ್, ಡಯಟ್ ಉಪನಿರ್ದೇಶಕ ಎಂ.ಶಿವಮಾದಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಟಿ.ಸೌಭಾಗ್ಯ, ಚಂದ್ರಕಾಂತ, ಶಿಕ್ಷಣ ಇಲಾಖೆ ಸಂಘಟಕ ಕೆ.ನಾಗೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.