ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಕೆಆರ್‌ಎಸ್‌ ಹಿನ್ನೀರಿನಲ್ಲಿ ಗೋಚರಿಸಿದ ಗುಡಿ

Published 22 ಜನವರಿ 2024, 15:13 IST
Last Updated 22 ಜನವರಿ 2024, 15:13 IST
ಅಕ್ಷರ ಗಾತ್ರ

ಮಂಡ್ಯ: ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿರುವುದರಿಂದ, ಮೈಸೂರು ಜಿಲ್ಲಾ ವ್ಯಾಪ್ತಿಯ ಬೋರೆ ಆನಂದೂರು ಹಿನ್ನೀರು ಪ್ರದೇಶದಲ್ಲಿ ಮುಳುಗಿದ್ದ ನಾರಾಯಣಸ್ವಾಮಿ ದೇವಾಲಯ ಗೋಚರಿಸುತ್ತಿದೆ.

ಮಳೆ ಕೊರತೆಯಿಂದಾಗಿ ಸದ್ಯ ಜಲಾಶಯದ ನೀರಿನ ಮಟ್ಟ 92.40 ಅಡಿಗೆ ಕುಸಿದಿದೆ. ಜಲಾಶಯಕ್ಕೆ ಕೇವಲ 350 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ನೀಡಿರುವುದರಿಂದ 1,002 ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ.

ದೇವಾಲಯದ ಮೂರ್ತಿಯನ್ನು ಹೊರಗೆ ತಂದು ಮಜ್ಜಿಗೆಪುರ ಗ್ರಾಮದಲ್ಲಿ ಪ್ರತ್ಯೇಕ ದೇವಾಲಯ ನಿರ್ಮಿಸಿ ಪ್ರತಿಷ್ಠಾ‍ಪಿಸಲಾಗಿದೆ. ಸದ್ಯ ಹಿನ್ನೀರಿನಲ್ಲಿ ದೇವಾಲಯದ ಅವಶೇಷಗಳಿವೆ.

‘2022ರಲ್ಲೂ ದೇವಾಲಯ ಗೋಚರಿಸಿತ್ತು, ಈಗ ಮತ್ತೆ ಕಾಣಿಸುತ್ತಿದ್ದು ಮೇ ತಿಂಗಳವರೆಗೂ ಕುಡಿಯುವ ನೀರು ಸಿಗುವುದು ಅನುಮಾನ. ಬೆಳೆದು ನಿಂತಿರುವ ಲಕ್ಷಾಂತರ ಎಕರೆ ಬೆಳೆ ನಾಶವಾಗುವುದು ನಿಶ್ಚಿತ. ಜನ, ಜಾನುವಾರುಗಳನ್ನು ಕಾಪಾಡುವವರು ಯಾರು’ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡ ಕೆ.ಬೋರಯ್ಯ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT