ಸೋಮವಾರ, ಆಗಸ್ಟ್ 8, 2022
22 °C

ಭತ್ತದ ಗದ್ದೆಯಲ್ಲಿ ಕಾಡಾನೆ ಕಳೇಬರ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಳವಳ್ಳಿ: ತಾಲ್ಲೂಕಿನ ನೆಟ್ಕಲ್ ಗ್ರಾಮದ ಕೆರೆ ಸಮೀಪದ ಭತ್ತದ ಗದ್ದೆಯಲ್ಲಿ ಬುಧವಾರ ಕಾಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ.

ಗ್ರಾಮದ ನಾಗಯ್ಯ ಎಂಬುವರಿಗೆ ಸೇರಿದ ಭತ್ತದ ಗದ್ದೆಯಲ್ಲಿ 7ರಿಂದ 8 ವರ್ಷದ ಗಂಡಾನೆಯ ಶವ ಮಧ್ಯಾಹ್ನ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳವಾರ ತಡರಾತ್ರಿ ಕಾಡಾನೆಗಳ ಗುಂಪೊಂದು ಭತ್ತದ ಗದ್ದೆಗೆ ಬಂದಿವೆ. ಇದರಲ್ಲಿ ಗಂಡಾನೆಯೊಂದು ಮೃತಪಟ್ಟಿದ್ದು, ಶವ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ರಮೇಶ್‌ ತಿಳಿಸಿದರು.

ಎಸಿಎಫ್ಅಂಕರಾಜು, ಆರ್‌ಎಫ್‌ಒ ಮಹದೇವಸ್ವಾಮಿ, ನಂದೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು