ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ: ದೇವಸ್ಥಾನದ ಬೀಗ ಮುರಿದು ಹುಂಡಿ ಹಣ ಕಳವು

Published 27 ನವೆಂಬರ್ 2023, 13:03 IST
Last Updated 27 ನವೆಂಬರ್ 2023, 13:03 IST
ಅಕ್ಷರ ಗಾತ್ರ

ಮಳವಳ್ಳಿ: ಪಟ್ಟಣದ ಹೊರವಲಯದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದ ಬೀಗ ಮುರಿದ ಕಳ್ಳರು ಹುಂಡಿ ಹೊತ್ತೊಯ್ದು ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಬೆಂಗಳೂರು- ಮದ್ದೂರು ಹೆದ್ದಾರಿಯ ಬಳಿಯ ದೇವಸ್ಥಾನದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದೊಣ್ಣೆಗಳಿಂದ ಬಲ್ಬ್ಗಳನ್ನು ಒಡೆದು ಹಾಕಿ ಒಳನುಗ್ಗಿದ ಕಳ್ಳರು ಹುಂಡಿಯನ್ನು ಹೊರವಲಯಕ್ಕೆ ಹೊತ್ತೊಯ್ದು ಹಣ ತೆಗೆದುಕೊಂಡು ಹುಂಡಿ ಬಿಸಾಕಿ ಪರಾರಿಯಾಗಿದ್ದಾರೆ.

ಕಳೆದೊಂದು ತಿಂಗಳಲ್ಲಿ ದೇವಸ್ಥಾನದಲ್ಲಿ ಹುಂಡಿ ಕಳವುವಾಗಿರುವುದು ಇದು ಎರಡನೇ ಬಾರಿಯಾಗಿದ್ದು, ಹೆದ್ದಾರಿ ಪಕ್ಕದಲ್ಲಿ ಹಾಗೂ ಪಟ್ಟಣದ ಶಕ್ತಿದೇವತೆಯ ದೇವಸ್ಥಾನದಲ್ಲಿಯೇ ಪದೇ ಪದೇ ಕಳ್ಳತನ ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT