ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಈ ಬಾರಿ ಶ್ರೀರಂಗಪಟ್ಟಣದಲ್ಲಿ ಅದ್ದೂರಿ ದಸರಾ’

ಶಾಸಕ ರಮೇಶ ಬಂಡಿಸಿದ್ದೇಗೌಡ ಮಾಹಿತಿ
Published 1 ಆಗಸ್ಟ್ 2023, 14:03 IST
Last Updated 1 ಆಗಸ್ಟ್ 2023, 14:03 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ಪಟ್ಟಣದಲ್ಲಿ ದಸರಾ ಉತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಪಟ್ಟಣದ ನಾಡಪ್ರಭು ಕೆಂಪೇಗೌಡ ವೃತ್ತದಿಂದ ಶ್ರೀರಂಗನಾಥಸ್ವಾಮಿ ದೇವಾಲಯದವರೆಗೆ ಮಂಗಳವಾರ ರಸ್ತೆಯ ಸ್ಥಿತಿಗತಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.

‘ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ₹5 ಕೋಟಿ ಹಣ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೂ ಕೋರಿಕೆ ಸಲ್ಲಿಸಿದ್ದೇನೆ. ಅಗತ್ಯ ಹಣ ಬಿಡುಗಡೆ ಮಾಡುವ ವಿಶ್ವಾಸ ಇದೆ’ ಎಂದು ಅವರು ಹೇಳಿದರು.

‘ದಸರಾ ಉತ್ಸವದ ಹೊತ್ತಿಗೆ ಪಟ್ಟಣದ ನಾಡಪ್ರಭು ಕೆಂಪೇಗೌಡ ವೃತ್ತದಿಂದ ಶ್ರೀರಂಗನಾಥಸ್ವಾಮಿ ದೇವಾಲಯದವರೆಗೆ ರಸ್ತೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದು. ಪಟ್ಟಣ ಹಾಗೂ ಆಸುಪಾಸಿನ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ವರದಿ ನೀಡಿವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

‘ಶ್ರೀರಂಗಪಟ್ಟಣ 200 ವರ್ಷಗಳ ಕಾಲ ರಾಜಧಾನಿಯಾಗಿದ್ದ ಪ್ರಸಿದ್ಧ ಪಾರಂಪರಿಕ ಪಟ್ಟಣ. ಈ ಪಟ್ಟಣದ ಆಸುಪಾಸಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಪ್ರವಾಸಿಗರನ್ನು ಆಕರ್ಷಿಸಲು ಮುಂದಿನ ದಿನಗಳಲ್ಲಿ ವಿಶೇಷ ಯೋಜನೆ ರೂಪಿಸಲಾಗುವುದು’ ಎಂದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಹರ್ಷ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ನಾಗರಾಜು, ಪುರಸಭೆ ಮುಖ್ಯಾಧಿಕಾರಿ ರಾಣಿ, ಸದಸ್ಯರಾದ ಎಂ.ಎಲ್‌. ದಿನೇಶ್‌, ಎಸ್‌.ಎನ್‌. ದಯಾನಂದ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಕಸಬಾ ಸೊಸೈಟಿ ಮಾಜಿ ಅಧ್ಯಕ್ಷ ಸೋಮಸುಂದರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT