ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ: ಜೀವ ಬೆದರಿಕೆ -ದೂರು ದಾಖಲು

Published 20 ನವೆಂಬರ್ 2023, 14:53 IST
Last Updated 20 ನವೆಂಬರ್ 2023, 14:53 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ‘ತಾಲ್ಲೂಕಿನ ಮೋದೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ದೂರು ನೀಡಲು ಬಂದಿದ್ದ ವೇಳೆ 10 ಮಂದಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ’ ಎಂದು ಗ್ರಾಮದ ಭೈರಪ್ಪ ಎಂಬುವವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಲವು ಅವ್ಯವಹಾರ ನಡೆದಿವೆ. ನೇಮಕಾತಿಯಲ್ಲಿ ಮೀಸಲಾತಿ ಅನ್ವಯಿಸಿರಲಿಲ್ಲ. ಈ ಕುರಿತಂತೆ, ಸಹಕಾರ ಉಪನಿಬಂಧಕರಿಗೆ ನೀಡಿದ್ದ ದೂರಿನ ಅನ್ವಯ ದಿನಾಂಕ ನ.18ರಂದುರಂದು ವಿಚಾರಣೆಗೆ ಕರೆಯಲಾಗಿತ್ತು. ದೂರು ನೀಡಲು ಬಂದಿದ್ದ ನನ್ನ ಮೇಲೆ ಡೇರಿ ಕಾರ್ಯದರ್ಶಿ ಸೇರಿದಂತೆ 10 ಮಂದಿ  ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಗ್ರಾಮಾಂತರ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT