ನಾಗಮಂಗಲ: ಸ್ವಿಫ್ಟ್ ಕಾರು ಮತ್ತು ಮಿನಿ ಬಸ್ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಗೇಟ್ನ ಚಾಮರಾಜನಗರ - ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಭಾನುವಾರ ನಡೆದ ಅಪಘಾತದಲ್ಲಿ ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಮತ್ತು ಸಂಗಮ್ಮ (55) ಮೃತಪಟ್ಟಿದ್ದಾರೆ.

ತಾಲ್ಲೂಕಿನ ಆದಿಚುಂಚನಗಿರಿ ಯಿಂದ ಮೈಸೂರಿನ ಕಡೆಗೆ ವಾಪಾಸಾ ಗುತ್ತಿದ್ದಾಗ ಮೈಸೂರಿನ ಕಡೆಯಿಂದ ಬಂದ ಮಿನಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಶ್ರೇಯಾ (15) ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಿನಿ ಬಸ್ನಲ್ಲಿದ್ದ ಚಾಲಕ ಸೇರಿದಂತೆ ನಾಲ್ಕು ಮಂದಿಗೆ ಗಾಯವಾಗಿದ್ದು, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್.ಪಿ ಎನ್.ಯತೀಶ್, ಡಿವೈಎಸ್ಪಿ ನವೀನ್ ಕುಮಾರ್, ಎಸ್.ಐ ಸತೀಶ್ ಕುಮಾರ್ ಭೇಟಿ ನೀಡಿದರು. ಮೃತ ದೇಹಗಳನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಘಟನೆಯ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.