ಸೋಮವಾರ, ಫೆಬ್ರವರಿ 24, 2020
19 °C
ಶ್ರೀರಂಗಪಟ್ಟಣ

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಜಲ ಸಮಾಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಪಟ್ಟಣದ ರೈಲು ನಿಲ್ದಾಣ ಸಮೀಪ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕರು ನದಿ ಸೆಳವಿಗೆ ಸಿಲುಕಿ ಮೃತಪಟ್ಟಿದ್ದಾರೆ. ಮುಜಾಸಿಮ್ (17), ತೌಸೀಫ್ (17) ಮತ್ತು ಇಫ್ತಿಕಾರ್ (18) ಮೃತರು.

ಮುಜಾಸೀಮ್‌ ಶವ ಪತ್ತೆಯಾಗಿದೆ. ಉಳಿದವರ ಶವಗಳಿಗೆ ಹುಡುಕಾಟ ನಡೆದಿದೆ. ಎಲ್ಲರೂ ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎಂದು ತಿಳಿದು ಬಂದಿದೆ.

ಮೈಸೂರಿನ ಮದರಸದಲ್ಲಿ ಅರೇಬಿಕ್ ವ್ಯಾಸಂಗ ಮಾಡುತ್ತಿದ್ದರು. ಮೀನು ಹಿಡಿಯಲು ನದಿಗೆ ಇಳಿದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಶ್ರೀರಂಗಪಟ್ಟಣದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು