ಶ್ರೀರಂಗಪಟ್ಟಣ: ‘ತಂಬಾಕು ಉತ್ಪನ್ನಗಳ ಸೇವನೆ ಕ್ಯಾನ್ಸರ್ ಇತರ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗಲಿದೆ’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಎಚ್ಚರಿಸಿದರು.

ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ಪಾಲಹಳ್ಳಿಯ ಆಯುಷ್ಮಾನ್ ಆರೋಗ್ಯ ಕೇಂದ್ರ ಮತ್ತು ಪಿ. ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ತಂಬಾಕು ಮುಕ್ತ ಯುವ ಅಭಿಯಾನದ ನಿಮಿತ್ತ ಮಂಗಳವಾರ ಏರ್ಪಡಿಸಿದ್ದ ಗುಲಾಬಿ ಆಂದೋಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ತಂಬಾಕಿನಲ್ಲಿ ನೂರಾರು ವಿಷಕಾರಿ ರಾಸಾಯನಿಕಗಳಿವೆ. ತಂಬಾಕು ಸೇವನೆಯಿಂದ ವಿಶ್ವದಾದ್ಯಂತ ವರ್ಷಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸಾಯುತ್ತಿದ್ದಾರೆ. ಹಾಗಾಗಿ ಗುಟ್ಕಾ, ಬೀಡಿ, ಸಿಗರೇಟು ಇತರ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರ ಇರಬೇಕು’ ಎಂದು ತಿಳಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್ ಮಾತನಾಡಿ, ‘ಶಾಲೆ, ಕಾಲೇಜು ವಿದ್ಯಾರ್ಥಿಗಳು ತಂಬಾಕು ಸೇವನೆಯ ಚಟಕ್ಕೆ ಅಂಟಿಕೊಳ್ಳುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳ ಹವ್ಯಾಸಗಳ ಬಗ್ಗೆ ಎಚ್ಚರಿಕೆ ವಹಿಸಬೇಕು’ ಎಂದರು. ಕೋಟ್ಪಾ ಕಾಯಿದೆ ಕುರಿತು ಅವರು ಮಾಹಿತಿ ನೀಡಿದರು.

ಪಿ. ಹೊಸಹಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶಶಿಕಲಾ, ‘ಕಾರೇಕುರ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲಾಗಿದೆ. ಕಾಯಿದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಸೇವನೆ ಮತ್ತು ಮಾರಾಟ ಮಾಡಿದರೆ ದಂಡ ಮತ್ತು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ. ಹೇಮಣ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಅಂಗಡಿ–ಮುಂಗಟ್ಟುಗಳಿಗೆ ತೆರಳಿ ಜಾಗೃತಿ ಮೂಡಿಸಲಾಯಿತು.

ಮುಖಂಡರಾದ ಸಿದ್ದೇಗೌಡ, ಕೆ.ಬಿ. ಸ್ವಾಮಿ, ವೆಂಕಟೇಶ್, ಸಮುದಾಯ ಆರೋಗ್ಯಾಧಿಕಾರಿ ಅನುಷಾ, ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಸುಮಾದೇವಿ, ಆರೋಗ್ಯ ನಿರೀಕ್ಷಣಾಧಿಕಾರಿ ರಮ್ಯಾ, ಅಂಗನವಾಡಿ ಕಾರ್ಯಕರ್ತೆ ಗಾಯತ್ರಿ, ಆಶಾ ಕಾರ್ಯಕರ್ತೆಯರಾದ ಬಿಂದು, ಪಾರ್ವತಿ, ನಾಗರತ್ನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.