ಬುಧವಾರ, ಸೆಪ್ಟೆಂಬರ್ 22, 2021
28 °C

ಪಿಂಡ ಪ್ರದಾನಕ್ಕೆ ಟೋಕನ್‌ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಪಟ್ಟಣದ ಆಸುಪಾಸಿನ ಸ್ಥಳಗಳಲ್ಲಿ ಮಹಾಲಯ ಅಮಾವಾಸ್ಯೆಯಂದು ಪಿತೃಗಳಿಗೆ ಪಿಂಡ ಪ್ರದಾನ, ತರ್ಪಣೆ ಇತರ ಕಾರ್ಯ ನಡೆಸುವವರಿಗೆ ಟೋಕನ್‌ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ್‌ ಎಂ.ವಿ. ರೂಪಾ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

ಪಟ್ಟಣದ ನದಿ ತೀರ, ಗಂಜಾಂ, ಗೋಸಾಯಿಘಾಟ್‌, ಪಶ್ಚಿಮವಾಹಿನಿ ಮತ್ತು ಕಾವೇರಿ ಸಂಗಮ ಅಪಾರ ಭಕ್ತರು ಬರಲಿದ್ದಾರೆ. ಪೂಜೆ, ಹೋಮ, ಹವನ ಇನ್ನಿತರ ಧಾರ್ಮಿಕ ಕಾರ್ಯಗಳಿಗಾಗಿ ಬರುವವರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ಸ್ಯಾನಿಟೈಸರ್‌ ನೀಡಬೇಕು. ಅಂತರ ಕಾಪಾಡಿಕೊಳ್ಳುವ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 10 ವರ್ಷ ಒಳಗಿನ ಮತ್ತು 65 ವರ್ಷ ಮೇಲ್ಪಟ್ಟವರಿಗೆ ಅವಕಾಶ ನೀಡಬಾರದು. ಬಟ್ಟೆ, ಇತರ ತ್ಯಾಜ್ಯವನ್ನು ನದಿಯಲ್ಲಿ ವಿಸರ್ಜಿಸಬಾರದು ಎಂದು ತಿಳಿಸಿದ್ದಾರೆ.

ಇಲ್ಲಿಗೆ ಜನರನ್ನು ಕರೆ ತರುವ ವಾಹನಗಳಿಂದ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್‌ ಶುಲ್ಕ ವಸೂಲಿ ಮಾಡಲು ಅವಕಾಶ ನೀಡಬಾರದು. ಪ್ರತಿ ಪೂಜೆಗೆ 15 ನಿಮಿಷ ಮಾತ್ರ ಕಾಲಾವಕಾಶ ನೀಡಬೇಕು. ನಿಯಮ ಉಲ್ಲಂಘಿಸುವ ಅರ್ಚಕರು/ ವ್ಯವಸ್ಥಾಪಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು