ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ: ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷರಾಗಿ ಟಿ.ಪಿ. ರೇವಣ್ಣ ಆಯ್ಕೆ

Published 18 ಡಿಸೆಂಬರ್ 2023, 14:06 IST
Last Updated 18 ಡಿಸೆಂಬರ್ 2023, 14:06 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಕಂದಾಯ ಇಲಾಖಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕಸಬಾ ಹೋಬಳಿ ವ್ಯಾಪ್ತಿಯ ಕಂದಾಯ ನಿರೀಕ್ಷಕ ಟಿ.ಪಿ. ರೇವಣ್ಣ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ. ತಮ್ಮಣ್ಣಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಎ.ಎನ್‌. ಭಾಸ್ಕರ್‌ ಅವರ ಮ್ಮುಖದಲ್ಲಿ ಟಿ.ಪಿ. ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾಗಿ ಕೆ. ದಿನೇಶಕುಮಾರ್‌, ಕಾರ್ಯದರ್ಶಿಯಾಗಿ ಸಿದ್ದ ಮಹೇಶ್ವರ ಪ್ರಶಾಂತ್‌, ಉಪಾಧ್ಯಕ್ಷರಾಗಿ ನವೀನ್‌, ಜಿಲ್ಲಾ ಪ್ರತಿನಿಧಿಯಾಗಿ ಎಚ್. ಮಂಜುನಾಥ್‌ ಮತ್ತು ನಿರ್ದೇಶಕರಾಗಿ ಜಯಂತ್‌, ಮಹೇಂದ್ರ, ಲಾವಣ್ಯ, ಉಮೇಶ್‌, ರೇವತಿ ಆಯ್ಕೆಯಾದರು.

ಕಂದಾಯ ಇಲಾಖಾ ನೌಕರರ ಸಂಘದ ಸದಸ್ಯರ ಹಿತಕ್ಕಾಗಿ, ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ ಎಂದು ನೂತನ ಅಧ್ಯಕ್ಷ ಟಿ.ಪಿ. ರೇವಣ್ಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT