ಬೆಳ್ಳೂರು ಬಳಿ ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು

ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ಕಂಚಿನಕೋಟೆ ಗೇಟ್ ಸಮೀಪ ಸೋಮವಾರ ರಾತ್ರಿ ಚಲಿಸುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಹಾಸನದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಮಾರುತಿ ಸುಜುಕಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಗಾಯತ್ರಿ (35) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಕೃಷ್ಣಪ್ಪ (70) ಆಸ್ಪತ್ರೆಯಲ್ಲಿ ಸತ್ತಿದ್ದಾರೆ.
ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುವಾಗ ಅಪಘಾತವಾಗಿದೆ. ಕಾರು ಚಾಲನೆ ಮಾಡುತ್ತಿದ್ದ ದಿನೇಶ್ ಮತ್ತು ತ್ರಿಷಾ, ಸರೋಜಮ್ಮ ತೀವ್ರವಾಗಿ ಗಾಯಗೊಂಡಿದ್ದು, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರಿನಲ್ಲಿದ್ದವರು ಕೆ.ಆರ್.ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿಯವರಾಗಿದ್ದು, ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ನೆಲೆಸಿದ್ದರು.
ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಫಟನೆ ಸಂಬಂಧ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.