‘45 ಹೊಸ ಬಸ್‌ಗಳಿಗೆ ಬೇಡಿಕೆ’
‘ಶಕ್ತಿ ಯೋಜನೆ ಜಾರಿಯಾದ ನಂತರ ಮಂಡ್ಯ ವಿಭಾಗಕ್ಕೆ 87 ಹೊಸ ಬಸ್‌ಗಳು ಸೇರ್ಪಡೆಯಾಗಿದ್ದು ಇನ್ನೂ 45 ಬಸ್‌ಗಳ ಬೇಡಿಕೆ ಇದೆ ಎಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಂಡ್ಯ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ. ನಾಗರಾಜು ಮಾಹಿತಿ ನೀಡಿದರು.
ಕೆ.ಆರ್. ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳುವಿನಲ್ಲಿ ₹1.25 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸಲಾಗಿದ್ದು ಜೂನ್ 24ಕ್ಕೆ ಉದ್ಘಾಟನೆಯಾಗಲಿದೆ. ಇದರಿಂದ ವಿಭಾಗದ ವ್ಯಾಪ್ತಿಯ ಬಸ್ ನಿಲ್ದಾಣಗಳ ಸಂಖ್ಯೆ 19ಕ್ಕೆ ಏರಿಕೆಯಾಗುತ್ತದೆ. ಲಭ್ಯವಿರುವ ಬಸ್‌ಗಳ ಮೂಲಕ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.