ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು- ಹಾಸನ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

Published 19 ಜೂನ್ 2023, 5:04 IST
Last Updated 19 ಜೂನ್ 2023, 5:04 IST
ಅಕ್ಷರ ಗಾತ್ರ

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ‌ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು- ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಹಿರೀಕಳಲೆ ಗ್ರಾಮದ ಸಂದೇಶ್ (25), ಮರಡಹಳ್ಳಿಯ ಭರತ್ (23) ಮೃತಪಟ್ಟವರು.

ಎಳನೀರು ವ್ಯಾಪಾರ ಮಾಡುತ್ತಿದ್ದ ಯುವಕರು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುವಾಗ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಸಾಧ್ಯತೆ ಇದೆ, ವಾಹನ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT