ಕೆ.ಆರ್.ಪೇಟೆ: ‘ಹಿಂದೂಗಳಾಗಲಿ- ಮುಸ್ಲಿಮರಾಗಲಿ; ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಯುಗಾದಿ ಮತ್ತು ಈದ್–ಉಲ್–ಫಿತರ್ ಹಬ್ಬವನ್ನು ಆಚರಿಸಿ’ ಎಂದು ನಾಗಮಂಗಲ ಡಿವೈಎಸ್ಪಿ ಚೆಲುವರಾಜು ಮನವಿ ಮಾಡಿದರು.

ಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಈದ್–ಉಲ್–ಫಿತರ್ ಹಾಗೂ ಯುಗಾದಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೋಮು ಸೌಹಾರ್ದತೆಗೆ ತಾಲ್ಲೂಕು ರಾಜ್ಯದಲ್ಲಿಯೇ ಮಾದರಿಯಾಗಿದೆ. ಆದ್ದರಿಂದ ಹಿಂದೂ ಹಾಗೂ ಮುಸ್ಲಿಂ ಬಾಂಧವರು ವದಂತಿಗಳಿಗೆ ಕಿವಿಗೊಡದೆ, ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಿ ಸ್ಪಂದಿಸಬೇಕು. ಯಾವುದೇ ಸಂದರ್ಭದಲ್ಲಿಯೂ ಕಾನೂನನ್ನು ಕೈಗೆತ್ತಿಕೊಳ್ಳದೆ ವಿಷಯವನ್ನು ಪೊಲೀಸರಿಗೆ ತಿಳಿಸಬೇಕು. ಸಮಾಜದ ಶಾಂತಿಯ ಸುವ್ಯವಸ್ಥೆಯನ್ನು ಕದಡುವ ಕಿಡಿಗೇಡಿಗಳ ಬಗ್ಗೆ ಎಚ್ಚರದಿಂದಿದ್ದು ಅಂತಹವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಮನವಿ ಮಾಡಿದರು.

ಕೆ.ಆರ್.ಪೇಟೆ ಪಟ್ಟಣ ಠಾಣೆ, ಗ್ರಾಮಾಂತರ ಠಾಣೆ ಮತ್ತು ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಕಹಿ ಘಟನೆಗಳಿಗೆ ಅವಕಾಶ ಮಾಡಿಕೊಡದೆ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಹಬ್ಬಗಳನ್ನು ಆಚರಿಸಬೇಕೆಂದು ತಿಳಿಸಿದರು.

ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಮತ್ತು ಕಿಕ್ಕೇರಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಮ್ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಮುಸ್ಲಿಂ ಮತ್ತು ಹಿಂದೂ ಸಮಾಜದ ಮುಖಂಡರು ಸಲಹೆ ಸೂಚನೆಗಳನ್ನು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.