ಮಂಡ್ಯ: ‘ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ’ ಎಂದು ಜಿಲ್ಲಾಧಿಕಾರಿ ಕುಮಾರ ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ ಎಲ್ಲ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಹೇಳಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮಗಳನ್ನು ರೂಪಿಸಿ’ ಎಂದರು.

‘ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಯಾವುದೇ ವಿಳಂಬ ಮಾಡದೆ ಸಂಬಂಧಪಟ್ಟ ಇಲಾಖೆಯ ಎಲ್ಲ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೌರ್ಜನ್ಯಕ್ಕೊಳಗಾದ ವ್ಯಕ್ತಿಯ ಸಂಬಂಧಪಟ್ಟ ವಾರಸುದಾರರ ದಾಖಲೆಗಳನ್ನು ಪಡೆದು ಕೂಡಲೇ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಶ್ರೀನಿವಾಸ್. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಜಾಗೃತ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ನೌಕರಿ ನೀಡುವ ಪ್ರಕ್ರಿಯೆ ಹಾಗೂ ಪಿಂಚಣಿ ನೀಡುವ ಸೌಲಭ್ಯಗಳನ್ನು ಶ್ರೀಘ್ರವಾಗಿ ನಡೆಸಬೇಕು
ಕುಮಾರ ಜಿಲ್ಲಾಧಿಕಾರಿ ಮಂಡ್ಯ

‘ಕುಂದುಕೊರತೆ ಸಭೆ ನಡೆಸಿ’:

‘ಎಲ್ಲ ತಹಶೀಲ್ದಾರ್ಗಳು ತಮ್ಮ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕುರಿತು ಜಾಗೃತಿ ಸಮಿತಿ ಸಭೆ ಹಾಗೂ ಕುಂದುಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಸಮರ್ಪಕವಾಗಿ ಕುಂದು ಕೊರತೆಗಳ ಸಭೆ ಆಯೋಜನೆ ಮಾಡುವುದು ಸಂಬಂಧಪಟ್ಟ ಇಲಾಖೆಯ ಸಹಾಯಕ ನಿರ್ದೇಶಕರ ಜವಾಬ್ದಾರಿಯಾಗಿದೆ’ ಎಂದು ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು. ಜಾತಿ ಕುರಿತು ಇನ್ನೂ ಇರುವ ಅಸಹನೆಯನ್ನು ನಾಗರಿಕ ಸಮಾಜದಲ್ಲಿರುವ ಪ್ರತಿಯೊಬ್ಬ ಪ್ರಜ್ಞಾವಂತರು ಖಂಡಿಸುವ ಕೆಲಸ ಮಾಡಬೇಕಿದೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಸಾಧ್ಯವಾದಷ್ಟು ಬೇಗ ಮುಗಿಸಿ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.